ಭಾನುವಾರ, ಏಪ್ರಿಲ್ 27, 2025
HomeSportsCricketYashaswi Jaiswal : ಪಾನಿಪುರಿ ಹುಡುಗನಿಗೆ ಸಿಗಲಿದ್ಯಾ ವಿಂಡೀಸ್ ಟಿಕೆಟ್? ಟಿ20 ರೇಸ್‌ನಲ್ಲಿ ರಿಂಕು ಸಿಂಗ್!

Yashaswi Jaiswal : ಪಾನಿಪುರಿ ಹುಡುಗನಿಗೆ ಸಿಗಲಿದ್ಯಾ ವಿಂಡೀಸ್ ಟಿಕೆಟ್? ಟಿ20 ರೇಸ್‌ನಲ್ಲಿ ರಿಂಕು ಸಿಂಗ್!

- Advertisement -

ಬೆಂಗಳೂರು : (Yashaswi Jaiswal) ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು, ಕೆರಿಬಿಯನ್ ನಾಡಿನಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿಯನ್ನಾಡಲಿದೆ. ಜುಲೈ 12ರಂದು ಡೊಮಿನಿಕಾದಲ್ಲಿರುವ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಪ್ರಥಮ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಹಲವು ಹೊಸಮುಖಗಳಿಗೆ ಬಿಸಿಸಿಐ ಮಣೆ ಹಾಕುವ ಸಾಧ್ಯತೆಯಿದೆ. ಮುಖ್ಯವಾಗಿ ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್-2023 ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿರುವ ಮುಂಬೈನ ಯುವ ಎಡಗೈ ಓಪನರ್ ಯಶಸ್ವಿ ಜೈಸ್ವಾಲ್ (Yashaswi Jaiswal) ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ.

ಐಪಿಎಲ್-2023 ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಅಮೋಘ ಪ್ರದರ್ಶನ ತೋರಿದ್ದ 21 ವರ್ಷದ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಿಂದ ಒಂದು ಶತಕ ಹಾಗೂ 5 ಅರ್ಧಶತಕಗಳ ನೆರವಿನಿಂದ 163.61ರ ಸ್ಟ್ರೈಕ್‌ ರೇಟ್‌ನಲ್ಲಿ 625 ರನ್ ಕಲೆ ಹಾಕಿದ್ದರು. ದೇಶೀಯ ಕ್ರಿಕೆಟ್‌ನಲ್ಲೂ ಅಬ್ಬರಿಸಿರುವ ಯಶಸ್ವಿ ಜೈಸ್ವಾಲ್ 2022ರ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅಮೋಘ ದ್ವಿಶತಕ (265 ರನ್) ಬಾರಿಸಿ ಪಶ್ಚಿಮ ವಲಯ ತಂಡಕ್ಕೆ ಚಾಂಪಿಯನ್‌ಶಿಪ್ ಗೆಲ್ಲಿಸಿಕೊಟ್ಟಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ನಡೆದ ಮಧ್ಯಪ್ರದೇಶ ವಿರುದ್ಧದ ಇರಾನಿ ಕಪ್ ಪಂದ್ಯದಲ್ಲೂ ಮಿಂಚಿದ್ದ ಯಶಸ್ವಿ ಜೈಸ್ವಾಲ್ ಪ್ರಥಮ ಇನ್ನಿಂಗ್ಸ್‌ನಲ್ಲಿ 213 ರನ್ ಬಾರಿಸಿದ್ರೆ, 2ನೇ ಇನ್ನಿಂಗ್ಸ್‌ನಲ್ಲಿ ಸ್ಫೋಟಕ 144 ರನ್ ಸಿಡಿಸಿದ್ದರು. ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಇದುವರೆಗೆ 15 ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ 80.21ರ ಅಮೋಘ ಸರಾಸರಿಯಲ್ಲಿ 9 ಶತಕ ಹಾಗೂ 2 ಅರ್ಧಶತಕಗಳ ಸಹಿತ 1845 ರನ್ ಗಳಿಸಿದ್ದಾರೆ.

ಮತ್ತೊಂದೆಡೆ ಐಪಿಎಲ್-2023 ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರ ಫಿನಿಷರ್ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದ ಉತ್ತರ ಪ್ರದೇಶದ ಎಡಗೈ ದಾಂಡಿಗ ರಿಂಕು ಸಿಂಗ್ (Rinku Singh) ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿರುವ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿತೆ. ಐಪಿಎಲ್ ಟೂರ್ನಿಯ ಗುಜರಾತ್ ಟೈಟನ್ಸ್ ವಿರುದ್ಧದ ಲೀಗ್ ಪಂದ್ಯದಲ್ಲಿ ಕೆಕೆಆರ್ ಗೆಲುವಿಗೆ ಕೊನೆಯ ಓವರ್‌ನಲ್ಲಿ 30 ರನ್‌ಗಳ ಅವಶ್ಯಕತೆಯಿದ್ದಾಗ ಸತತ ಐದು ಸಿಕ್ಸರ್ ಬಾರಿಸಿದ್ದ ರಿಂಕು ಸಿಂಗ್ ನಂಬಲಸಾಧ್ಯ ರೀತಿಯಲ್ಲಿ ಕೆಕೆಆರ್ ತಂಡವನ್ನು ಗೆಲ್ಲಿಸಿ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದರು.

ಇದನ್ನೂ ಓದಿ : KL Rahul : ಲಂಡನ್‌ನಲ್ಲಿ ಸರ್ಜರಿ ಮುಗಿಸಿ ಮನೆಗೆ ಮರಳಿದ ಕನ್ನಡಿಗ ಕೆ.ಎಲ್ ರಾಹುಲ್

ಭಾರತದ ವೆಸ್ಟ್ ಇಂಡೀಸ್ ಪ್ರವಾಸದ ವೇಳಾಪಟ್ಟಿ (India tour of West Indies 2023 Fixtures) :

  • ಪ್ರಥಮ ಟೆಸ್ಟ್: ಜುಲೈ12-16 (ವಿಂಡ್ಸರ್ ಪಾರ್ಕ್, ಡೊಮಿನಿಕಾ)
  • ದ್ವಿತೀಯ ಟೆಸ್ಟ್: ಜುಲೈ 20-24 (ಕ್ವೀನ್ಸ್ ಪಾರ್ಕ್ ಓವಲ್, ಟ್ರಿನಿಡಾಡ್)
  • ಮೊದಲ ಏಕದಿನ: ಜುಲೈ 27 (ಕೆನ್ನಿಂಗ್ಟನ್ ಓವಲ್, ಬಾರ್ಬೆಡೋಸ್)
  • ಎರಡನೇ ಏಕದಿನ: ಜುಲೈ 29 (ಕೆನ್ನಿಂಗ್ಟನ್ ಓವಲ್, ಬಾರ್ಬೆಡೋಸ್)
  • ಮೂರನೇ ಏಕದಿನ: ಆಗಸ್ಟ್ 01 (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್)
  • ಮೊದಲ ಟಿ20: ಆಗಸ್ಟ್ 04 (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್)
  • ಎರಡನೇ ಟಿ20: ಆಗಸ್ಟ್ 06 (ನ್ಯಾಷನಲ್ ಸ್ಟೇಡಿಯಂ, ಗಯಾನ)
  • ಮೂರನೇ ಟಿ20: ಆಗಸ್ಟ್ 08 (ನ್ಯಾಷನಲ್ ಸ್ಟೇಡಿಯಂ, ಗಯಾನ)
  • ನಾಲ್ಕನೇ ಟಿ20: ಆಗಸ್ಟ್ 12 (ಬ್ರೊವಾರ್ಡ್ ಕೌಂಟಿ ಸ್ಟೇಡಿಯಂ, ಲಾಡರ್‌ಹಿಲ್; ಫ್ಲೋರಿಡಾ)
  • ಐದನೇ ಟಿ20: ಆಗಸ್ಟ್ 13 (ಬ್ರೊವಾರ್ಡ್ ಕೌಂಟಿ ಸ್ಟೇಡಿಯಂ, ಲಾಡರ್‌ಹಿಲ್; ಫ್ಲೋರಿಡಾ)

Yashaswi Jaiswal : Panipuri boy got Windies ticket? Rinku Singh in the T20 race!

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular