ಪೊಚೆಫ್‌ಸ್ಟ್ರೂಮ್ : ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಇಂದು ನಡೆಯಲಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಬಾಂಗ್ಲಾ ಎದುರಾಳಿಯಾಗಿದೆ. ಲೀಗ್ ಹಂತದಲ್ಲಿ ಒಂದೇ ಒಂದು ಸೋಲನ್ನೇ ಕಂಡಿರದ ಭಾರತ ಬಾಂಗ್ಲಾದೇಶವನ್ನು ಎದುರಿಸಲಿದೆ.

ವಿಶ್ವಕಪ್ ಪಂದ್ಯಗಳಲ್ಲಿ ನಾಲ್ಕು ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದ ಭಾರತ ಸತತ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಪಾಕಿಸ್ತಾನದ ವಿರುದ್ದ ರೋಚಕ ಜಯಗಳಿಸಿದ್ದ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದ್ರೆ, ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದಿರುವ ಬಾಂಗ್ಲಾ ದೇಶ ಎರಡನೇ ತಂಡವಾಗಿ ಫೈನಲ್ ಪ್ರವೇಶಿಸಿದೆ. ಭಾರತ ಹಾಗೂ ಬಾಂಗ್ಲಾ ತಂಡಗಳು ಬಲಿಷ್ಠವಾಗಿದ್ದು, ಫೈನಲ್ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ