Jagadish Shettar : ಚುನಾವಣಾ ಟಿಕೆಟ್‌ ಮಿಸ್‌, ಹೈಕಮಾಂಡ್‌ಗೆ ಸಡ್ಡು ಹೊಡೆದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election 2023) ಟಿಕೆಟ್‌ ಮಿಸ್‌ ಆಗುವ ಸೂಚನೆ ದೊರೆತ ಬೆನ್ನಲ್ಲೇ ಬಿಜೆಪಿ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar) ಹೈಕಮಾಂಡ್‌ಗೆ ಸಡ್ಡು ಹೊಡೆದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದೇ ಇದ್ರೆ ಪಕ್ಷೇತರನಾಗಿ ಸ್ಪರ್ಧೆ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌ (Jagadish Shettar) , ಹೈಕಮಾಂಡ್‌ ಇಂದು ಬೆಳಗ್ಗೆ ಕರೆ ಮಾಡಿ ಯುವ ನಾಯಕರಿಗೆ ಅವಕಾಶ ಕಲ್ಪಿಸುವಂತೆ ಹೇಳಿದ್ದಾರೆ. ಆದರೆ ಹೈಕಮಾಂಡ್‌ ನಿರ್ಧಾರಕ್ಕೆ ನನ್ನ ಸಮ್ಮತಿಯಿಲ್ಲ. ಚುನಾವಣೆಗೆ ನಿಲ್ಲ ಬೇಡ ಎಂದು ಎರಡರಿಂದ ಮೂರು ತಿಂಗಳ ಹಿಂದೆಯೇ ಹೇಳಬಹುದಿತ್ತು. ಬೇರೆಯವರಿಗೆ ಟಿಕೆಟ್‌ ನೀಡುವಂತೆ ತಿಳಿಸಬಹುದಿತ್ತು. ಆದರೆ ನಾಮಪತ್ರ ಸಲ್ಲಿಕೆ ಎರಡು ದಿನ ಇರುವಾಗ ಈ ರೀತಿ ಹೇಳಿರುವುದು ಬೇಸರ ಮೂಡಿಸಿದೆ ಎಂದಿದ್ದಾರೆ.

ನನ್ನ ಕ್ಷೇತ್ರದಿಂದ ಆರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪ್ರತೀ ಬಾರಿಯೂ ೩೦ ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ಬಂದಿದ್ದೇನೆ. ಜನರು ಇಂದಿಗೂ ನನ್ನ ಮೇಲೆ ಪ್ರೀತಿ ಇಟ್ಟಿದ್ದಾರೆ. ನಾನು ಯಡಿಯೂರಪ್ಪ ಸೇರಿ ಪಕ್ಷ ಕಟ್ಟಿದ್ದೇವೆ. ನನಗೆ ಕ್ಷೇತ್ರದ ಜನರ ಆಶೀರ್ವಾದ ಇಂದಿಗೂ ಇದೆ. ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್‌ ಸಿಗದೇ ಇದ್ರೆ ಪಕ್ಷೇತರನಾಗಿ ಕಣಕ್ಕೆ ಇಳಿಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಪಕ್ಷದ ವರಿಷ್ಠರ ನಿರ್ಧಾರದಿಂದ ನನಗೆ ತೀವ್ರ ಬೇಸರವಾಗಿದೆ. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇ ನನಗೆ ಮೈನಸ್‌ ಆಗಿದೆ. ಈ ಬಾರಿ ಚುನಾವಣೆಗೆ ಸಂಬಂಧಿಸಿದಂತೆ ನಡೆಸಿದ ಸರ್ವೆಯಲ್ಲಿಯೂ ನನ್ನ ಪರವಾಗಿಯೇ ಜನಾಭಿಪ್ರಾಯ ವ್ಯಕ್ತವಾಗಿತ್ತು. ಆದರೂ ಪಕ್ಷದ ವರಿಷ್ಠರು ಈ ರೀತಿಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ತಮ್ಮ ನಿರ್ಧಾರವನ್ನು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನುವ ವಿಶ್ವಾಸವನ್ನು ಜಗದೀಶ್‌ ಶೆಟ್ಟರ್‌ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಜೆಪಿ ಟಿಕೆಟ್‌ ಘೋಷಣೆಗೆ ಮುನ್ನವೇ ಬಿಜೆಪಿಯ ಹಿರಿಯ ಮುಖಂಡರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಅಲ್ಲದೇ ವಿ.ಸೋಮಣ್ಣ, ಆನಂದ ಸಿಂಗ್‌ ಕೂಡ ಚುನಾವಣಾ ರಾಜಕೀಯದಿಂದ ದೂರ ಸರಿಯುವ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ : KS Eshwarappa retirement : ಚುನಾವಣಾ ರಾಜಕೀಯಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ

ಇದನ್ನೂ ಓದಿ : V Somanna resign politics: ಕೆ.ಎಸ್‌ ಈಶ್ವರಪ್ಪ ಬೆನ್ನಲ್ಲೇ ವಿ. ಸೋಮಣ್ಣ ರಾಜಕೀಯಕ್ಕೆ ರಾಜಿನಾಮೆ ?

Jagadish Shettar Rebel after BJP ticket Miss in Karnataka Election 2023

Comments are closed.