ಶಬರಿಮಲೆ : ಶಬರಿಮಲೆಯ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
10 ರಿಂದ 50 ವರ್ಷದೊಳಗಿನ ಮಹಿಳೆಯರು ಕೂಡ ಶಬರಿಮಲೆ ಪ್ರವೇಶಿಸುವುದಕ್ಕೆ ಅನುಮತಿ ನೀಡಿ 2018ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದಲ್ಲದೇ, ದೇಶದಾದ್ಯಂತ ಬಾರೀ ಪ್ರತಿಭಟನೆ ನಡೆದಿತ್ತು. ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಕೋರಿ 60 ಅರ್ಜಿಗಳು ಸಲ್ಲಿಕೆಯಾಗಿವೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ 9 ನ್ಯಾಯಮೂರ್ತಿಗಳ ಪೀಠದಲ್ಲಿ ಇಂದು ಈ ಅರ್ಜಿಗಳ ವಿಚಾರಣೆ ನಡೆಯಲಿದೆ.
ಶಬರಿಮಲೆಗೆ ಮಹಿಳೆಯರ ಪ್ರವೇಶ : ಸುಪ್ರೀಂನಲ್ಲಿಂದು ಮರುಪರಿಶೀಲನಾ ಅರ್ಜಿ ವಿಚಾರಣೆ
- Advertisement -