Lokayukta Raid : ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿದ್ದು 40 ಲಕ್ಷ ಅಲ್ಲಾ, ಬದಲಾಗಿ 1.62 ಕೋಟಿ : ಬಿಜೆಪಿ ಶಾಸಕನ ಪುತ್ರ ಸೇರಿ ಐವರು ಅರೆಸ್ಟ್‌

ಬೆಂಗಳೂರು: Lokayukta Raid : ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (BJP MLA Madal Virupakshappa)ಗೆ ಶಾಕ್‌ ಕೊಟ್ಟಿದ್ದಾರೆ. ಟೆಂಡರ್‌ ವಿಚಾರಕ್ಕೆ ಲಕ್ಷಾಂತರ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆಯಲ್ಲಿ ಪುತ್ರ ಪ್ರಶಾಂತ್ ಮಾಡಾಳ್ (Prashanth Madal) ಲೋಕಾಯುಕ್ತ (Lokayuktha) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಾಸಕರ ಕಚೇರಿಯ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿದ್ದು, 40 ಲಕ್ಷ ಅಲ್ಲಾ ಬದಲಾಗಿ 1.62 ಕೋಟಿ ರೂಪಾಯಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಪ್ರಶಾಂತ್‌ ಮಾಡಾಳ್‌ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಚೆನ್ನಗಿರಿ ಶಾಸಕ ಮಾಡಾಳ್ ವಿರೋಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ಮಾಡಾಳ್ ವಿರುದ್ದ ಎಫ್‌ಐಆರ್ ದಾಖಲಿಸಿಕೊಂಡು ದಾಳಿ ಮಾಡಲಾಗಿದೆ. ಜಲಮಂಡಳಿ ಹಾಗೂ ಎಸಿಬಿ ಎರಡಲ್ಲೂ ಅಕೌಂಟೆಂಟ್ ಆಗಿ ಪ್ರಶಾಂತ್‌ ಕಾರ್ಯನಿರ್ವಹಿಸುತ್ತಿದ್ದರು. ಕಚ್ಚಾ ಸಾಮಾಗ್ರಿ ಕಂಪನಿಯನ್ನು ನಡೆಸುತ್ತಿದ್ದ ಶ್ರೇಯಸ್ ಕಶ್ಯಪ್ ಎಂಬವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಗುರುವಾರ ಪ್ರಶಾಂತ್ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ರೆಡ್ ಹ್ಯಾಂಡ್ (Lokayukta Raid) ಆಗಿ ಸಿಕ್ಕಿಬಿದ್ದಿದ್ದಾರೆ. ಅವರಿಗೆ ಲಂಚ ನೀಡಲು ಮುಂದಾಗಿದ್ದ ಇನ್ನೂ ನಾಲ್ವರನ್ನು ಬಂಧಿಸಲಾಗಿದೆ. ಪ್ರಶಾಂತ್ 40 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರೂ ದಾಳಿ ವೇಳೆ ಒಟ್ಟು 1.62 ಕೋಟಿ ರೂ. ಸಿಕ್ಕಿದೆ. ಸದ್ಯ ಪ್ರಶಾಂತ್ ಕಚೇರಿಯಲ್ಲಿ ಸಿಕ್ಕಿರುವ ಹಣದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇನ್ನೂ ಹಲವು ಸ್ಥಳಗಳಲ್ಲಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಾಯುಕ್ತ ಡಿಐಜಿ ಸುಬ್ರಮಣ್ಯ ರಾವ್ ತಿಳಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್‌ ಮಾಡಾಳ್‌, ನಿಯೋಜನೆಯ ಮೇರೆಗೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಯಾಗಿ ಕೆಲಸ ಮಾಡುತ್ತಿದ್ದ. ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 80 ಲಕ್ಷ‌ ರೂ. ಲಂಚದ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಕೇಳಿ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಪ್ರಶಾಂತ್‌ ಮಾಡಾಳ್‌ ಲಂಚ ಸ್ವೀಕಾರ ಮಾಡುತ್ತಿದ್ದ ಖಾಸಗಿ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿತ್ತು. ನಂತರದಲ್ಲಿ ಡಾಲರ್ಸ್‌ ಕಾಲೋನಿ ನಿವಾಸದ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಇನ್ನು ಚೆನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

https://www.youtube.com/watch?v=mSV1r6ET1Kc&feature=youtu.be

ಇದನ್ನೂ ಓದಿ : Delhi Liquor Scam : ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅರೆಸ್ಟ್ : AAP ಮುಂದಿನ ನಡೆಯೇನು ?

ಇದನ್ನೂ ಓದಿ : Prashant Arrest : ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕರ ಪುತ್ರ ಪ್ರಶಾಂತ್ : ಟೆಂಡರ್‌ ಕೊಡಿಸಲು 40 ಲಕ್ಷ ರೂ. ಲಂಚ ಸ್ವೀಕಾರ

Comments are closed.