ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದಲೂ ಧಾರಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲದೇ ಮುಂದಿನ ಎರಡು ದಿನಗಳ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ದಿನಗಳ ಕಾಲ ರಜೆ (2 days holiday) ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲೊಮ, ಐಟಿಐ ಸೇರಿದಂತೆ ಸರಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಜುಲೈ ೮ ಮತ್ತು ೯ ರಂದು ರಜೆ ಘೋಷಣೆ ಮಾಡಿ ಪರಿಷ್ಕೃತ ಆದೇಶವನ್ನು ಹೊರಡಿಸಲಾಗಿದೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಮಾತ್ರವೇ ರಜೆಯನ್ನು ನೀಡಲಾಗಿತ್ತು. ಆದ್ರೀಗ ಪರಿಷ್ಕೃತ ಆದೇಶದಲ್ಲಿ ಜಿಲ್ಲಾಡಳಿತ ಎರಡು ದಿನಗಳ ಕಾಲ ರಜೆಯನ್ನು ಘೋಷಿಸಿದೆ. ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗ್ತಿದೆ. ಹವಾಮಾನ ಇಲಾಖೆ ಕೂಡ ಮುಂದಿನ 2 ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂದಿನ 2 ದಿನಗಳಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆ ಶುಕ್ರವಾರ ಹಾಗೂ ಶನಿವಾರದಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು , ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಅನ್ವಯವಾಗುವಂತೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : Holiday announcement : ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ
ಇದನ್ನೂ ಓದಿ : Attention Education Minister : ಶಿಕ್ಷಣ ಸಚಿವರೇ ಗಮನಿಸಿ: ರಾಜಧಾನಿ ಶಾಲೆಗೆ ಸಿಕ್ಕಿಲ್ಲ ಪಠ್ಯಪುಸ್ತಕ
2 days holiday for schools in Dakshin Kannada district: Here is the revised order