ಕೋಲಾರ : ದೇವಸ್ಥಾನದ ಪ್ರಸಾದ (temple prasad) ಸೇವಿಸಿ 19 ಮಂದಿ ಮಕ್ಕಳು ಸೇರಿದಂತೆ 53 ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಕೋಲಾರದ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ವೀರಗಾನಹಳ್ಳಿಯಲ್ಲಿ ನಡೆದಿದೆ.
ವೀರಗಾನಹಳ್ಳಿಯ ಗಂಗಮ್ಮ ದೇವಸ್ಥಾನದಲ್ಲಿ ಪೂಜೆಯ ನಂತರದಲ್ಲಿ ಕೇಸರಿಬಾತ್ ಹಾಗೂ ಚಿತ್ರಾನ್ನವನ್ನು ಭಕ್ತರಿಗೆ ಪ್ರಸಾದದ ರೂಪದಲ್ಲಿ ನೀಡಲಾಗಿತ್ತು. ಪ್ರಸಾದ ಸೇವಿಸಿ ಮನೆಗೆ ತೆರಳಿದ್ದ ಅನೇಕ ಭಕ್ತರು ಅಸ್ವಸ್ಥಗೊಂಡಿದ್ದರು. ಕೂಡಲೇ ಒಬ್ಬೊಬ್ಬರನ್ನೇ ಶ್ರೀನಿವಾಸಪುರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೇವಸ್ಥಾನದಲ್ಲಿ ಪ್ರಸಾದ ಸ್ವೀಕಾರ ಮಾಡಿದ್ದ ಸುಮಾರು 19 ಮಕ್ಕಳು ಸೇರಿದಂತೆ 53 ಮಂದಿ ಅಸ್ವಸ್ಥಗೊಂಡಿದ್ದಾರೆ. ಇದೀಗ ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗಿದೆ. ಈ ಪೈಕಿ ಸುಮಾರು 17 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ತೀವ್ರವಾಗಿ ಅಸ್ವಸ್ಥಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಘಟನೆಯ ಬೆನ್ನಲ್ಲೇ ತಾಲೂಕು ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ದೇವಸ್ಥಾನದಲ್ಲಿ ತಿಂದ ಪ್ರಸಾದದಿಂದಲೇ ಭಕ್ತರು ಅಸ್ವಸ್ಥರು ಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲೀಗ ವೈದ್ಯಾಧಿಕಾರಿ ಗಳು ತನಿಖೆಯನ್ನು ನಡೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಪ್ರಸಾದ ವಿಷವಾಗುವುದಕ್ಕೆ ಕಾರಣವೇನು ಅನ್ನೋ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಅಪ್ರಾಪ್ತರು ಸೇರಿ 9 ಮಂದಿಯ ಬಂಧನ
ಡ್ಯಾಂಗ್ : 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಗುಜರಾತ್‌ನ ಡ್ಯಾಂಗ್ ಜಿಲ್ಲೆಯಲ್ಲಿ ನಡೆದಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಮಂದಿ ಕಾಮುಕರನ್ನು ಬಂಧಿಸಿದ್ದಾರೆ.
ಸುಮಾರು ಎರಡು ತಿಂಗಳ ಹಿಂದೆ ನಡೆದಿತ್ತು. ಆದರೆ ಅತ್ಯಾಚಾರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಂಬಂಧಿಯೋರ್ವರು ವಿಡಿಯೋವನ್ನು ನೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಹ್ವಾ ತಾಲೂಕಿನಲ್ಲಿ ಅಪ್ರಾಪ್ತ ಸ್ನೇಹಿತನೊಬ್ಬ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಪಕ್ಕದ ಹಳ್ಳಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಯ ಮೇಲೆ ಮೊದಲು ಅತ್ಯಾಚಾರವೆಸಗಿದ್ದಾನೆ. ಅದೇ ದಾರಿಯಲ್ಲಿ ಕಾಯುತ್ತಿದ್ದ ಹುಡುಗನ ಇತರ ಎಂಟು ಸ್ನೇಹಿತರು, ನಂತರ ಆಕೆಯನ್ನು ಸಮೀಪದಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗುವ ವೇಳೆಯಲ್ಲಿ ಆರೋಪಿಯೊಬ್ಬ ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ ಮತ್ತು ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎನ್ ಎಚ್ ಸವ್ಸೆತಾ ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಒಟ್ಟು ಆರು ಮಂದಿ ಆರೋಪಿಗಳು ಸುಮಾರು 20 ವರ್ಷ ಆಸುಪಾಸಿನವರಾಗಿದ್ದು, ಉಳಿದ ಮೂವರು ಅಪ್ರಾಪ್ತರಾಗಿದ್ದಾರೆ. ಘಟನೆಯ ನಂತರದಲ್ಲಿ ವಿಚಾರವನ್ನು ಯಾರಿಗೆ ತಿಳಿಸದಂತೆ ಹುಡುಗಿಗೆ ಬೆದರಿಕೆಯೊಡ್ಡಿದ್ದಾರೆ. ಹೀಗಾಗಿಯೇ ಬಾಲಕಿ ಸುಮಾರು ಎರಡು ತಿಂಗಳ ಕಾಲ ಯಾರಿಗೂ ವಿಷಯವನ್ನು ತಿಳಿಸಿರಲಿಲ್ಲ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 23 ರಂದು ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಎಲ್ಲಾ ಆರೊಪಿಗಳನ್ನು ಡಿಸೆಂಬರ್ 24 ರಂದು ಬಂಧಿಸಿದ್ದಾರೆ. ಆದರೆ ಮೂವರು ಅಪ್ರಾಪ್ತರ ಪೋಷಕರು ತಮ್ಮ ಜಾಮೀನನ್ನು ಪಡೆದುಕೊಂಡಿ ದ್ದಾರೆ, ಆದರೆ ಆರು ಪುರುಷರನ್ನು ನ್ಯಾಯಾಲಯವು ಪೊಲೀಸ್ ರಿಮಾಂಡ್‌ಗೆ ಕಳುಹಿಸಲಾಗಿದೆ. ಆರೋಪಿಗಳ ವಿರುದ್ಧ 376 (ಡಿ) (ಎ) (ಅಪ್ರಾಪ್ತ ವಯಸ್ಕರ ಮೇಲೆ ಸಾಮೂಹಿಕ ಅತ್ಯಾಚಾರ), 506 (2) (ಅಪರಾಧ ಬೆದರಿಕೆ), 120 (ಬಿ) (ಅಪರಾಧ ಪಿತೂರಿ) ಮತ್ತು 114 (ಪ್ರಚೋದಕ) ಸೇರಿದಂತೆ ವಿವಿಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ಕೊರೊನಾ ಸೋಂಕಿನ ಲಕ್ಷಣವಿಲ್ಲದ ರೋಗಿಗಳನ್ನು ಡಿಸ್ಚಾರ್ಜ್ ಮಾಡಿ: ಸುಲಿಗೆ ತಡೆಯಲು ಆರೋಗ್ಯ ಇಲಾಖೆ ಆದೇಶ
ಇದನ್ನೂ ಓದಿ : ಕೊರಗರ ಮೇಲಿನ ದೌರ್ಜನ್ಯ ಪ್ರಕರಣ ಸಿಒಡಿ ತನಿಖೆಗೆ ಒಪ್ಪಿಸಿ ಆದೇಶ
( 53 sick including 19 children who consumed Temple Prasad)