ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅದ್ರಲ್ಲೂ ಬೆಂಗಳೂರು ಉತ್ತರ ತಾಲೂಕಿನ ಉಪ ವಿಭಾಗಾಧಿಕಾರಿ ಆಗಿದ್ದ ಕೆಎಎಸ್ ಅಧಿಕಾರಿ ಕೆ.ರಂಗನಾಥ್ (K Ranganath) ಮನೆ ಮೇಲೆ ಎಬಿಸಿ (ACB Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭೂ ಮಾಫಿಯಾದವರೊಂದಿಗೆ ಸೇರಿ ಖಾಸಗಿ ವ್ಯಕ್ತಿಗಳಿಂದ ಜಮೀನು ಪರಭಾರೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು, ರಂಗನಾಥ್ ವಿರುದ್ದ ತನಿಖೆಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತದ ಪ್ರಧಾನ ವ್ಯವಸ್ಥಾಪಕರಾಗಿರುವ ಕೆ.ರಂಗನಾಥ್ ಈ ಹಿಂದೆ ಬೆಂಗಳೂರು ಉತ್ತರ ತಾಲೂಕಿನ ಉಪ ವಿಭಾಗಾಧಿಕಾರಿ ಆಗಿದ್ದ ವೇಳೆಯಲ್ಲಿ ಸರಕಾರದ ಸುಪರ್ದಿಯಲ್ಲಿದ್ದ ಗೋಮಾಳ ಜಮೀನಿಗೆ ಸೇರಿದಮತೆ ಮೂಲ ಮಂಜೂರಾತಿ ದಾಖಲೆಗಳನ್ನು ಪರಿಶೀಲನೆ ನಡೆಸದೇ, ತಹಶೀಲ್ದಾರರಿಂದ ಯಾವುದೇ ವರದಿಯನ್ನೂ ಪಡೆದಿರಲಿಲ್ಲ. ಭೂ ಮಾಫಿಯಾದವರೊಂದಿಗೆ ಶಾಮೀಲಾಗಿ, ಖಾಸಗಿ ವ್ಯಕ್ತಿಗಳಿಗೆ ಜಮೀನು ಪರಭಾರೆ ಮಾಡಿರು ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿಂದು 42 ಎಸಿಬಿ ಅಧಿಕಾರಿಗಳ 5 ತಂಡ ರಂಗನಾಥ್ ಅವರಿಗೆ ಸೇರಿದ ನ್ಯಾಯಾಂಗ ಬಡಾವಣೆಯಲ್ಲಿರುವ ವಾಸದ ಮನೆ, ದೊಡ್ಡಬಳ್ಳಾಪುರ ನಗರದ ದತ್ತಾತ್ರೇಯ ಕಲ್ಯಾಣ ಮಂಟಪದ ಬಳಿಯಲ್ಲಿರುವ ಮನೆ, ದೊಡ್ಡಬಳ್ಳಾಪುರ ಟೌನ್‌ನಲ್ಲಿರುವ ಕನಕ ಟ್ರಸ್ಟ್ ಕಚೇರಿ, ಮತ್ತು ಅಕ್ಷರ ಪಬ್ಲಿಕ್ ಶಾಲೆ ಹಾಗೂ ನಾಗರಭಾವಿಯಲ್ಲಿರುವ ಸಂಬಂಧಿಕರ ವಾಸದ ಮನೆಗಳ ಮೇಲೆ ದಾಳಿಯನ್ನು ನಡೆಸಲಾಗಿದೆ.

ಜೊತೆಗೆ ಈ ಹಿಂದೆ ಬೆಂಗಳೂರು ಉತ್ತರ ತಾಲೂಕು ವಿಭಾಗಾಧಿಕಾರಿ ಕಚೇರಿ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಪರಿಶೀಲನಾ ಕಾರ್ಯವನ್ನು ನಡೆಸಲಾಗುತ್ತಿದೆ. ಬೆಳಗ್ಗೆ ಆರು ಗಂಟೆಯಿಂದಲೇ ದಾಳಿ ನಡೆಸಿದ್ದು, ಭೂ ಮಂಜೂರಾತಿ ದಾಖಲೆಗಳ ಕುರಿತು ಪರಿಶೀಲನೆಯನ್ನು ನಡೆಸಲಾಗುತ್ತಿದೆ. ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ : ರೈಲಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಶೌಚಾಲಯದಲ್ಲಿ ಅತ್ಯಾಚಾರ : ಆರೋಪಿ ಪರಾರಿ
ಇದನ್ನೂ ಓದಿ : ಉರುಸ್ ವೇಳೆಯಲ್ಲಿ ಆಹಾರ ಸೇವನೆ : 50 ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
(ACB Raid on KAS officer K Ranganath house, School and Trust )