22 ಲಕ್ಷ ರೂಪಾಯಿ ಹಂಚಿಕೊಳ್ಳುವಾಗ ಎಸಿಬಿ ಬೆಲೆಗೆ ಬಿದ್ದ ಅಧಿಕಾರಿಗಳು

0

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡದ ಭೂರಹಿತ ಫಲಾನುಭವಿಗಳಿಗೆ ಭೂ ಹಂಚಿಕೆಯಲ್ಲಿ ಅಧಿಕಾರಿಗಳು ಅಕ್ರಮವೆಸಗಿದ್ದಾರೆ. ಅದ್ರಲ್ಲೂ ಅಕ್ರಮದಿಂದ ಬಂದ ಸುಮಾರು 22 ಲಕ್ಷ ರೂಪಾಯಿ ಹಣವನ್ನು ಹಂಚಿಕೊಳ್ಳುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ದಾಳಿಯ ವೇಳೆಯಲ್ಲಿ ಸುಮಾರು 22 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ.

ಮಂಡಳಿಯ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸರಕಾರದ ವತಿಯಿಂದ ಜಮೀನು ಖರೀದಿಸಿ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಭೂ ಹಂಚಿಕೆಯನ್ನು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ಮಾಡಲಾಗುತ್ತಿತ್ತು.

ಈ ವೇಳೆಯಲ್ಲಿ ಅಧಿಕಾರಿಗಳು ಅಕ್ರಮವೆಸಗಿದ್ದು, ಕಳಪೆ ಗುಣಮಟ್ಟದ ಭೂಮಿಯನ್ನು ಮಧ್ಯವರ್ತಿಗಳ ಮೂಲಕ ಹೆಚ್ಚಿನ ಬೆಲೆಗೆ ಖರೀದಿಸಿ ಭೂರಹಿತರಿಗೆ ಹಂಚಿಕೆ ಮಾಡಿದ್ದರು. ಅಲ್ಲದೇ ಭೂ ಅಕ್ರಮದಲ್ಲಿ ಬಂದಿದ್ದ ಹಣವನ್ನು ಅಧಿಕಾರಿಗಳು ತಮ್ಮ ಕಚೇರಿಯಲ್ಲಿಯೇ ಹಂಚಿಕೆ ಮಾಡಿಕೊಳ್ಳುತ್ತಿದ್ದ ವೇಳೆಯಲ್ಲಿ ಖಚಿತ ಮಾಹಿತಿಯ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಲಭ್ಯವಾಗಿದೆ. ಅಲ್ಲದೇ ಎಸಿಬಿ ಅಧಿಕಾರಿಗಳು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ.

Leave A Reply

Your email address will not be published.