ಬೆಂಗಳೂರು : ಮದುವೆ ಪ್ರಸ್ತಾಪ ನಿರಾಕರಿಸಿ ಕಾರಣಕ್ಕೆ ಶಿಕ್ಷಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸಿಡ್ ದಾಳಿ ನಡೆಸಿದವನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 10 ಲಕ್ಷ ದಂಡ ಶಿಕ್ಷೆ ತೀರ್ಪು ಎತ್ತಿ ಹಿಡಿದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಿವಾಸಿ ಮಹೇಶ್ ಎಂಬಾತ ವಿವಾಹ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ 2014ರಲ್ಲಿ ಬೈಕ್‌ನಲ್ಲಿ ಬಂದು ಯುವತಿಗೆ ಆಸಿಡ್ ದಾಳಿ ನಡೆಸಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದರು. ಅಲ್ಲದೇ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಿಲ್ಲಾ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ.
ಆದ್ರೆ ಈ ಕುರಿತು ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ವಿ. ಶ್ರೀಶಾನಂದ್ ಅವರಿದ್ದ ಪೀಠ ಮಹತ್ವದ ಆದೇಶವನ್ನು ನೀಡಿದೆ. ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಪರಾಧರಿ ಮಹೇಶ್ ಗೆ ಜೀವಾವಧಿ ಶಿಕ್ಷೆಯ ಜೊತೆಗೆ 10 ಲಕ್ಷ ದಂಡ ಶಿಕ್ಷೆಯನ್ನು ವಿಧಿಸಿದೆ.
2014ರ ಪ್ರಕರಣ ಒಂದಕ್ಕೆ ಸಂಬಂಧಿಸಿ ಇಂದು ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷಕಿ ಮೇಲೆ ಆಸಿಡ್ ದಾಳಿ ಮಾಡಿದ್ದವನಿಗೆ ಕರ್ನಾಟಕ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಆಸಿಡ್ ದಾಳಿಗೆ ಒಳಗಾಗಿರುವ ಯುವತಿಗೆ ಆರ್ಥಿಕ ನೆರವು ಒದಗಿಸುವಂತೆಯೂ ಹೈಕೋರ್ಟ್ ಸೂಚನೆ ನೀಡಿದೆ. ಈ ಬಗ್ಗೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾ.ಬಿ. ವೀರಪ್ಪ, ನ್ಯಾ.ವಿ. ಶ್ರೀಶಾನಂದ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.