Anna Bhagya Scheme : ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ನಾಳೆಯಿಂದ ಜಮೆಯಾಗಲಿದೆ ಹಣ

ಬೆಂಗಳೂರು : Anna Bhagya Scheme : ಕಾಂಗ್ರೆಸ್‌ ಸರಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಯ ಪೈಕಿ ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ ಜಾರಿಗೆ ಬಂದಿದೆ. ಇದೀಗ ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿಯ ಬದಲು ಹಣ ನೀಡುವುದಾಗಿ ಸರಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಖಾತೆದಾರರ ಖಾತೆಗಳಿಗೆ ನಾಳೆಯಿಂದ ಹಣ ಜಮೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ ೫ ಗಂಟೆಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಚುನಾವಣೆಯಲ್ಲಿ ಅನ್ನಭಾಗ್ಯ ಫಲಾನುಭವಿಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿದೆ. ಈ ಪೈಕಿ ಐದು ಕೆಜಿ ಅಕ್ಕಿ ಕೇಂದ್ರ ಸರಕಾರದಿಂದ ನೀಡಲಾಗುತ್ತಿದ್ದು, ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲು ಅಕ್ಕಿಯ ಲಭ್ಯತೆ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಅಕ್ಕಿ ಬದಲು ಹಣ ನೀಡುವುದಾಗಿ ಘೋಷಣೆ ಮಾಡಿದೆ. ಅಂತೆಯೇ ನಾಳೆಯಿಂದ ಹಂತ ಹಂತವಾಗಿ ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ.

ರಾಜ್ಯ ಸರಕಾರ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಶಕ್ತಿ ಯೋಜನೆಯನ್ನು ಆರಂಭದಲ್ಲಿಯೇ ಜಾರಿ ಮಾಡಲಾಗಿದ್ದು, ಮಹಿಳೆಯರು ಸರಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಮಾಣಿಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಗೃಹಜ್ಯೋತಿ ಯೋಜನೆಯು ಜುಲೈ 1 ರಿಂದಲೇ ಜಾರಿಗೆ ಬಂದಿದ್ದು, ಅಗಸ್ಟ್‌ ತಿಂಗಳ ವಿದ್ಯುತ್‌ ಬಿಲ್‌ ಪಾವತಿ 200 ಯೂನಿಟ್‌ ವರೆಗಿನ ಬಳಕೆದಾರರಿಗೆ ಉಚಿತವಾಗಲಿದೆ. ಉಳಿದಂತೆ ಗೃಹಲಕ್ಷ್ಮೀ ಯೋಜನೆಗೆ ಈ ತಿಂಗಳ ಮಧ್ಯಭಾಗದಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆಪ್‌ ಆರಂಭಿಸಿದೆ.

ಇದನ್ನೂ ಓದಿ : Post Office Scheme : ಪೋಸ್ಟ್ ಆಫೀಸ್ ಯೋಜನೆ : ದಿನಕ್ಕೆ ರೂ 133 ಹೂಡಿಕೆ ಮಾಡಿ ಪಡೆಯರಿ 2 ಲಕ್ಷಕ್ಕೂ ಅಧಿಕ ಲಾಭ

ಇದನ್ನೂ ಓದಿ : Congress 5 Guarantee: 5 ಗ್ಯಾರಂಟಿ ಯೋಜನೆ ಜಾರಿ, ಆದಾಯಕ್ಕಾಗಿ ಕಾಂಗ್ರೆಸ್‌ ಹುಡುಕಾಟ

Comments are closed.