ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ದಿಸುವ ಕುರಿತು ಕೊನೆಗೂ ಮೌನ ಮುರಿದ ಅನಿತಾ ಕುಮಾರಸ್ವಾಮಿ

ರಾಮನಗರ : (Anita Kumaraswamy) ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸುತ್ತಿವೆ. ಈ ಮಧ್ಯೆ ಜೆಡಿಎಸ್‌ ಪಕ್ಷದ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ದಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು. ಈಗಾಗಲೇ ಭವಾನಿ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಟಿಕೆಟ್‌ ಗಾಗಿ ಫೈಟ್‌ ಶುರುವಾಗಿದೆ. ಈ ಮಧ್ಯೆ ಅನಿತಾ ಕುಮಾರಸ್ವಾಮಿ ತಾನು ಚುನಾವಣೆಗೆ ಸ್ಪರ್ಧಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ್ದು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

” ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿದ್ದಾರೆ. ಇದು ಶುದ್ದ ಸುಳ್ಳು, ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ” ಎಂದು ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ. ರಾಮನಗರ ಕ್ಷೇತ್ರವನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದು, ಪುನಃ ಸ್ಪರ್ಧಿಸುವ ಮಾತೆಲ್ಲಿ ಎಂದು ಅನಿತಾ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

೨೦೦೮ ರಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಎಚ್‌ಡಿ ದೇವೆಗೌಡ ಅವರ ಆದೇಶ ಗೌರವಿಸಿ ಅನಿತಾ ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಭಾಗವಹಿಸಿದ್ದು, ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯನವರಿಗೆ ಮಧುಗಿರಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಇದಾದ ಬಳಿಕ ಪಕ್ಷದ ಕೆಲಸ, ಮನೆಕೆಲಸಕ್ಕಷ್ಟೇ ಅನಿತಾ ಕುಮಾರಸ್ವಾಮಿ ಸೀಮಿತವಾಗಿದ್ದರು. ೨೦೧೩ ರಲ್ಲಿಯೂ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರು. ಇದೀಗ ಚುನಾವಣಾ ಕಣದಿಂದ ಹಿಂದೆ ಸರಿದು ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ಜನರ ಒಳಿತಿಗಾಗಿ ಕೆಲಸ ಮಾಡುತ್ತಿದ್ದು, ಇಂತಹ ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಸರಣಿ ಟ್ವೀಟ್‌ ಮಾಡುವ ಮೂಲಕ ಜನರಿಗೆ ತಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : FIR against BJP district president : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ದ ಎಫ್‌ಐಆರ್‌ ದಾಖಲು

ಇದನ್ನೂ ಓದಿ : FIR against DK Sivakumar: ಚುನಾವಣೆ ಹೊತ್ತಲ್ಲೇ ಡಿಕೆಶಿ ಗೆ ಎದುರಾಯ್ತು ಸಂಕಷ್ಟ : ಕೆಪಿಸಿಸಿ ಅಧ್ಯಕ್ಷ ವಿರುದ್ದ ಎಫ್‌ಐಆರ್‌ ದಾಖಲು

Anita Kumaraswamy: Anita Kumaraswamy has finally broken her silence about contesting the Karnataka assembly elections

Comments are closed.