ಸೋಮವಾರ, ಏಪ್ರಿಲ್ 28, 2025
HomekarnatakaBajrang Dal : ಕೈಗೆ ಮುಳುವಾಯ್ತಾ ಭಜರಂಗದಳ ನಿಷೇಧದ ಘೋಷಣೆ ?

Bajrang Dal : ಕೈಗೆ ಮುಳುವಾಯ್ತಾ ಭಜರಂಗದಳ ನಿಷೇಧದ ಘೋಷಣೆ ?

- Advertisement -

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಮೀಕ್ಷೆಗಳ ಆಧಾರದಲ್ಲಿ ಅಧಿಕಾರದ ಗದ್ದುಗೆಗೆ ಏರಲು ಕನಸು ಕಾಣುತ್ತಿರುವ ಕಾಂಗ್ರೆಸ್‌ ಪಕ್ಷ ಇದೀಗ ಭಜರಂಗದಳ (Bajrang Dal) ನಿಷೇಧ ಮುಳುವಾಗುವ ಸಾಧ್ಯತೆಯಿದೆ. ಕಾಂಗ್ರೆಸ್‌ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ್ರೆ ಭಜರಂಗದಳ ನಿಷೇಧಿಸುವ ಘೋಷಣೆಯನ್ನು ಮಾಡಿದೆ. ಆದ್ರೆ ಇದೇ ಘೋಷಣೆ ಇದೀಗ ಕಾಂಗ್ರೆಸ್‌ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ನಿಷೇಧ ವಾಪಾಸ್‌ ಪಡೆಯುವ ಮಾತುಗಳು ಕೇಳಿಬಂದಿವೆ.

ಶತಾಯಗತಾಯ ಅಧಿಕಾರಕ್ಕೇರಲು ಹವಣಿಸುತ್ತಿರುವ ಕಾಂಗ್ರೆಸ್‌ ಪಕ್ಷ ರಾಜ್ಯದಾದ್ಯಂತ ಭರ್ಜರಿ ಪ್ರಚಾರವನ್ನು ನಡೆಸುತ್ತಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು, ಕಾಂಗ್ರೆಸ್‌ ಯವರಾಜ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಖುದ್ದು ಕರ್ನಾಟಕದಲ್ಲಿ ಪ್ರಚಾರ ಕಾರ್ಯವನ್ನು ಕೈಗೊಂಡಿದ್ದಾರೆ. ಇನ್ನೊಂದೆಡೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೇರಲು ಕನಸು ಕಾಣುತ್ತಿದ್ದಾರೆ. ಈ ನಡುವಲ್ಲೇ ಇಂದು ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಆದರೆ ಪ್ರಣಾಳಿಕೆಯಲ್ಲಿರುವ ಭಜರಂಗದಳ ನಿಷೇಧ ವಿಚಾರ ಇದೀಗ ಬಿಜೆಪಿಯ ಪಾಲಿಗೆ ವರದಾನವಾಗಿ ಪರಿಣಮಿಸುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ಹಳೆ ಮೈಸೂರು, ಉತ್ತರ ಕರ್ನಾಟಕದ ಬಹುತೇಕ ವಿಧಾನಸಭಾ ಕ್ಷೇತ್ರಗಳು ಹಿಂದುತ್ವದ ಆಧಾರದ ಮೇಲೆಯೇ ಚುನಾವಣೆಗಳು ನಡೆಯುತ್ತಿವೆ. ಕಾಂಗ್ರೆಸ್‌ ಅಂತಹ ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕು ಅನ್ನೋ ಕಾರಣಕ್ಕೆ ಅಳೆದು ತೂಗಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ಆದರೆ ಭಜರಂಗದಳ ನಿಷೇಧ ಮಾತು ಕಾಂಗ್ರೆಸ್‌ ಪಾಲಿಗೆ ಮುಳುವಾಗಲಿದೆ. ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ನಿಷೇಧಕ್ಕೆ ಒಳಗಾಗಿರುವ ಪಿಎಫ್‌ಐ ಸಂಘಟನೆಯನ್ನು ಭಜರಂಗದಳಕ್ಕೆ ಹೋಲಿಕೆ ಮಾಡಿರುವುದು ಎಷ್ಟು ಸರಿ ಅಂತಾ ಹಲವರು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ಕಾಂಗ್ರೆಸ್‌ ಹಿಂದುಗಳ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ. ಚುನಾವಣೆಯ ಹೊತ್ತಲೇ ಭಜರಂಗದಳ ನಿಷೇಧದ ಘೋಷಣೆಯನ್ನೇ ಬಿಜೆಪಿ ಅಸ್ತ್ರವನ್ನಾಗಿಸಿಕೊಳ್ಳುವ ಸಾಧ್ಯತೆಯಿದೆ.

ಚುನಾವಣಾ ಪ್ರಚಾರ ಕಾರ್ಯಗಳು ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದೆ. ಬಿಜೆಪಿ ನಾಯಕರು ಅಭಿವೃದ್ದಿಯ ವಿಚಾರವನ್ನು ಮುಂದಿಟ್ಟು ಮತಯಾಚನೆಯನ್ನು ಮಾಡುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಮೋದಿ, ಅಮಿತ್‌ ಶಾ ಕೂಡ ಅಭಿವೃದ್ದಿ ಮಂತ್ರವನ್ನೇ ಜಪಿಸುತ್ತಿದ್ದರು. ಆದ್ರೆ ಕಾಂಗ್ರೆಸ್‌ ಪಕ್ಷ ಅದ್ಯಾವಾಗ ಪ್ರನಾಳಿಕೆಯಲ್ಲಿ ಭಜರಂಗದಳ ನಿಷೇಧದ ಘೋಷಣೆ ಮಾಡಿತೋ ಆವಾಗ್ಲೇ ಖುದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಕೂಡ ಭಜರಂಗದಳ (Bajrang Dal) ನಿಷೇಧದ ಘೋಷಣೆಯ ವಿರುದ್ದ ಹರಿಹಾಯ್ದಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕರು ರಾಮಮಂದಿರ ನಿರ್ಮಾಣಕ್ಕೂ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಹನುಮಂತನಿಗೂ ವಿರೋಧಿಸುತ್ತಿದ್ದಾರೆ ಎಂದಿದ್ದಾರೆ. ಒಟ್ಟಿನಲ್ಲಿ ಕರ್ನಾಟಕ ಚುನಾವಣೆಯಲ್ಲಿ ಭಜರಂಗದಳ ನಿಷೇಧದ ವಿಚಾರದ ಬಿಜೆಪಿಯಲ್ಲಿ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದೆ.

ಇದನ್ನೂ ಓದಿ : Basangouda Patil Yatnal‌ : ವಾಜಪೇಯಿ ಕಾಲದಲ್ಲೇ ಮಿನಿಸ್ಟರ್ ನಾನು: ಈಗ್ಯಾಕೆ ಸಿಎಂ ಆಗಬಾರದು ? ಯತ್ನಾಳ್ ಹೊಸಬಾಂಬ್

ಇದನ್ನೂ ಓದಿ : ಮೇ 3 ರಂದು ಕಡಲೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ : ಮಂಗಳೂರು-ಉಡುಪಿ ಮಾರ್ಗ ಬದಲಾವಣೆ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular