ಸುಪ್ರಿಂ ಕೋರ್ಟ್‌ ಆದೇಶಕ್ಕೆ ವಿರುದ್ದವಾಗಿ ಸಿದ್ದು ರೀಡೂ: ಸಿಎಂ ವಾಗ್ದಾಳಿ

ಬೆಂಗಳೂರು: ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭ ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣದ (Arkavati Denotification Case) ಕುರಿತು ಸದನದಲ್ಲಿ ಪ್ರಸ್ತಾಪಿಸಿದ ಸಿಎಂ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸಿದ್ದು ಕಾಲದ ಅರ್ಕಾವತಿ ಡಿನೋಟಿಫಿಕೇಷನ್‌ ನಲ್ಲಿ ಬೃಹತ್‌ ಭ್ರಷ್ಟಾಚಾರವಾಗಿದೆ. ಇದರ ವಿಚಾರಣೆ ನಡೆಸಿ ತಪ್ಪಿತಸ್ಥರನ್ನು ಜೈಲಿಗಟ್ಟುತ್ತೇವೆ ಎಂದು ವಿಧಾನಸಭೆಯಲ್ಲಿ ಬೊಮ್ಮಾಯಿ ಘೋಷಿಸಿದ್ದಾರೆ.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಹಗರಣದ ಮೂಲಕ ಎಂಟು ಸಾವಿರ ಕೋಟಿ ರೂ ಗಳಷ್ಟು ಬೃಹತ್‌ ಭ್ರಷ್ಟಾಚಾರ ನಡೆದಿದೆ. ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವು ಎಂದು ಸಿದ್ದು ಕಾಲದ ಅರ್ಕಾವತಿ ಡಿನೋಟಿಫಿಕೇಷನ್‌ ಕುರಿತು ನ್ಯಾಯಮೂರ್ತಿ ಕೆಂಪಣ್ಣ ಆಯೋಗ ಸಲ್ಲಿಸಿದ್ದ ವರದಿಯ ಆಯ್ದ ಭಾಗವನ್ನಿ ಸದನದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ ಅವರು ಈ ಘೋಷಣೆಯನ್ನು ಮಾಡಿದ್ದಾರೆ.

ಅಲ್ಲದೇ ಜಮೀನು ಮಾಲೀಕರ ಹಿತಾಸಕ್ತಿಗಾಗಿ ಎಂಟುನೂರಕ್ಕೂ ಹೆಚ್ಚು ಎಕರೆ ಜಮೀನನ್ನು ರೀಡೂ ಹೆಸರಿನಲ್ಲಿ ಡಿನೋಟಿಫಿಕೇಷನ್‌ ಮಾಡಿರುವುದು ಸತ್ಯ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಈ ವರದಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಸಿದ್ದರಾಮಯ್ಯ ತಮ್ಮ ಅವಧಿಯ ಹಗರಣ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದರು ಎಂದು ಬೊಮ್ಮಾಯಿ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ : Actor Anantnag: ಹಿರಿಯ‌ ನಟ ಅನಂತನಾಗ್ ಇಂದು ಬಿಜೆಪಿ ಸೇರ್ಪಡೆ

ಇದನ್ನೂ ಓದಿ : Free bus pass for students: ಏ.1 ರಿಂದಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್:‌ ಸಿಎಂ ಬೊಮ್ಮಾಯಿ

ಇದನ್ನೂ ಓದಿ : Kota Srinivas Poojary : ಶ್ರೀ ನಾರಾಯಣಗುರು ವಸತಿ ಶಾಲೆ : ಕೊನೆಗೂ ಆದೇಶ ಹೊರಡಿಸಿದ ಸಿಎಂ ಬೊಮ್ಮಾಯಿ

ಅಲ್ಲದೇ ” ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡಬೇಡಿ. ನೀವು ಗುತ್ತಿಗೆದಾರ ಕೆಂಪಣ್ಣನನ್ನು ತಂದರೆ, ನಮ್ಮ ಕಡೆಯಿಂದ ಜಸ್ಟೀಸ್‌ ಕೆಂಪಣ್ಣ ಬರುತ್ತಾರೆ ಎಂದು ಹೇಳಿದ್ದೆ. ಅರ್ಕಾವತಿ ಬಡಾವಣೆಗಾಗಿ ಸ್ವಾಧೀನಪಡಿಸಿಕೊಂಡಿದ್ದ 868 ಎಕರೆ ಜಮೀನಿನಲ್ಲಿ 852 ಎಕರೆಯನ್ನು ಕೈಬಿಟ್ಟಿದ್ದೀರಿ. ಸುಪ್ರಿಂ ಕೋರ್ಟ್ ಆದೇಶಕ್ಕೆ ವಿರುದ್ದವಾಗಿ ರೀಡೂ ಹೆಸರಲ್ಲಿ ಡಿನೋಟಿಫಿಕೇಷನ್‌ ಮಾಡಿದ್ದೀರಿ ಎಂದು ಆಯೋಗದ ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.” ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

Arkavati Denotification Case: Denotification redo against Supreme Court order: CM lashes out

Comments are closed.