Assault by students: ಕನ್ನಡ ಬಾವುಟ‌ ಹಿಡಿದು ಕುಣಿದ ವಿದ್ಯಾರ್ಥಿಗೆ ಥಳಿತ : ಕಠಿಣ ಕ್ರಮಕ್ಕೆ ಕನ್ನಡ ಪರ ಸಂಘಟನೆಗಳ ಆಗ್ರಹ

ಬೆಳಗಾವಿ: (Assault by students) ಪ್ರತಿಷ್ಠಿತ ಕಾಲೇಜ್‌ ಒಂದರಲ್ಲಿ ಫೆರವೆಲ್‌ ಡೇ ಆಚರಣೆ ವೇಳೆ ಕನ್ನಡ ಬಾವುಟ ಹಿಡಿದು ಕುಣಿದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಪ್ರಕರಣ ವಿಚಾರಣೆ ಇಂದು ಸುಪ್ರೀಂಕೋರ್ಟ್‌ ನಲ್ಲಿ ನಡೆಯಲಿದೆ. ಇದರ ಮಧ್ಯೆ ಮರಾಠಿ ಭಾಷೆಯ ವಿದ್ಯಾರ್ಥಿಗಳು ಕನ್ನಡ ಭಾವುಟ ಹಿಡಿದು ಕುಣಿಯುತ್ತಿದ್ದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಕನ್ನಡ ಬಾವುಟ ಹಿಡಿದು ಡ್ಯಾನ್ಸ್‌ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಕೆಲ ಪುಂಡ ವಿದ್ಯಾರ್ಥಿಗಳು ಏಕಾಏಕಿ ಮುಗಿಬಿದ್ದು ಹಲ್ಲೆ (Assault by students) ನಡೆಸಿದ್ದಾರೆ. ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಕರುನಾಡ ವಿಜಯ ಸೇನೆ ಯುವ ಘಟಕದ ಅಧ್ಯಕ್ಷ ಸಂಪತ್‌ ಕುಮಾರ್‌ ದೇಸಾಯಿ ಹಾಗೂ ಕಾರ್ಯಕರ್ತರು ಕಾಲೇಜಿಗೆ ಬೇಟಿ ನೀಡಿದ್ದಾರೆ. ಕಾಲೇಜು ಕ್ಯಾಂಪಸ್‌ ಒಳಗೆ ಪ್ರವೇಶ ನೀಡದಿದ್ದಕ್ಕಾಗಿ ಕಾಲೇಜು ಸಿಬ್ಬಂಧಿ ಹಾಗೂ ವಿಜಯ ಸೇನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಟಿಳಕವಾಡಿ ಪೊಲೀಸರು ಬೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಇದನ್ನೂ ಓದಿ : Tomato Prices Down : ಟೊಮ್ಯಾಟೊ ಕೆಜಿಗೆ 3ರೂ. : ದಿನೇ ದಿನೇ ಬೆಲೆ ಕುಸಿತದಿಂದ ರೈತರಿಗೆ ಸಂಕಷ್ಟ

ಇದನ್ನೂ ಓದಿ : TEACHER POST RECRUITMENT: 15,000 ಶಿಕ್ಷಕರ ನೇಮಕಾತಿ ತಾತ್ಕಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ನಾರಾಯಣ ಬರಮಣಿ ಭೇಟಿ ನೀಡಿ ಹಲ್ಲೆಗೊಳಗಾದ ವಿದ್ಯಾರ್ಥಿ ಮತ್ತು ಕರುನಾಡ ವಿಜಯ ಸೇನೆ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ. ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತುಗೊಳಿಸಲು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಟಿಳಕವಾಡಿಯ ಗೋಗಟೆ ಕಾಲೇಜಿಗೆ‌ ಮುತ್ತಿಗೆ ಹಾಕಲು ಕರುನಾಡ ವಿಜಯ ಸೇನೆ ಕಾರ್ಯಕರ್ತರು ನಿರ್ಧರಿಸಿದ್ದು ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

https://www.youtube.com/watch?v=i9sPlZvUufk

(Assault by students) An incident took place in Belgaum where a student was attacked while holding a Kannada flag during Farewell Day celebrations in a prestigious college. Karnataka-Maharashtra border dispute case hearing will be held today in the Supreme Court. Meanwhile, students of Marathi language attacked a student who was dancing with Kannada slogans.

Comments are closed.