ಕರ್ನಾಟಕ ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಮಾಜಿ ಸಚಿವ ಯು.ಟಿ ಖಾದರ್‌ (Assembly Speaker UT Khader) ಆಯ್ಕೆಯಾಗಿದ್ದಾರೆ. ಅವರು ಹಂಗಾಮಿ ಸ್ಪೀಕರ್‌ ಸ್ಥಾನಕ್ಕೆ ಆರ್‌. ವಿ ದೇಶಪಾಂಡೆ ಅವರಿಂದ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದ ಸ್ಪೀಕರ್‌ ಹುದ್ದೆಗೆ ಆರ್.ವಿ.ದೇಶಪಾಂಡೆ, ಟಿ.ಬಿ. ಜಯಚಂದ್ರ ಹಾಗೂ ಎಚ್‌.ಕೆ.ಪಾಟೀಲ್‌ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಮಂಗಳೂರು (ಉಳ್ಳಾಲ) ಶಾಸಕ ಯು.ಟಿ.ಖಾದರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಯು.ಟಿ ಖಾದರ್‌ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್‌ ಅವರನ್ನು ಹೊರತುಪಡಿಸಿ ಮತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೊದಲಿಗೆ ಯು.ಟಿ ಖಾದರ್‌ ಅವರ ಹೆಸರನ್ನು ಸಿಎಂ ಸಿದ್ಧರಾಮಯ್ಯ ಅವರು ಸೂಚಿಸಿರು. ಅದನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಅನುಮೋದಿಸಿದರು. ಆ ನಂತರ ಖಾದರ್‌ ಆಯ್ಕೆಯನ್ನು ಹಂಗಾಮಿ ಸ್ಪೀಕರ್‌ ಆರ್‌.ವಿ. ದೇಶಪಾಂಡೆ ಸದನದಲ್ಲಿ ಪ್ರಕಟಿಸಿದರು. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಖಾದರ್‌ ಕಾರ್ಯರಂಬ ಮಾಡಿದರು. ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಅಭಿನಂದಿಸಿ ಶುಭ ಕೋರಿದರು.

ಇದನ್ನೂ ಓದಿ : ಸ್ಯಾಂಡಲ್‌ವುಡ್‌ ನಟ ಶಿವ ರಾಜ್‌ಕುಮಾರ್‌ ಅವರನ್ನು ಭೇಟಿಯಾದ ರಣದೀಪಗ ಸಿಂಗ್‌ ಸುರ್ಜೇವಾಲಾ

ಇದನ್ನೂ ಓದಿ : ಮಂಗಳೂರು ಶಾಸಕ ಯು.ಟಿ.ಖಾದರ್ ನೂತನ ಸ್ಪೀಕರ್

ಮಂಗಳೂರು ಕ್ಷೇತ್ರದಿಂದ ಸತತ ಐದು ಬಾರಿ ಗೆಲುವು ಸಾಧಿಸಿ ಈ ಬಾರಿ ವಿಧಾನಸಬೆ ಪ್ರವೇಶಿಸಿದ್ದಾರೆ. ಅವರು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದಲ್ಲಿ ಆರೋಗ್ಯ, ಆಹಾರ ಹಾಗೂ ಕುಮಾರಸ್ವಾಮಿ ಸರಕಾರದಲ್ಲಿ ವಸತಿ, ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕರಾಗಿ ಕಾರ್ಯನಿರ್ವಹಿಸಿದ್ದರು. ಯು.ಟಿ.ಖಾದರ್‌ ಅವರ ತಂದೆ ಯು.ಟಿ.ಫರೀದ್‌ ಅವರು ಕೂಡ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಇದನ್ನೂ ಓದಿ : ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂದ ಸಿಎಂ ಸಿದ್ದರಾಮಯ್ಯ

Assembly Speaker UT Khader: UT Khader assumed office as Karnataka Assembly Speaker

Comments are closed.