ಬೆಂಗಳೂರು: (Bail for Madal Virupakshappa) ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಜಾರಿಗೊಳಿಸಿದೆ. 5 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಇದನ್ನು ನೀಡಲಾಗಿದ್ದು, ಆದೇಶ ತಲುಪಿದ 48 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ಕಚ್ಚಾವಸ್ತು ಖರೀದಿ ಟೆಂಡರ್ ಪ್ರಕ್ರಿಯೆ ಲಂಚ ಪ್ರಕರಣದ ಎ-1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರಿಗೆ ರಿಲೀಫ್ ಸಿಕ್ಕಿದೆ. ಆರು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ತೆರೆಮರೆಯಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದು, ಇದಕ್ಕಾಗಿ ಅರ್ಜಿಯನ್ನು ಕೂಡ ಸಲ್ಲಿಸಿದ್ದರು.
ಈ ಪ್ರಕರಣ ಸಂಬಂಧ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಗುರುವಾದ ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿದ್ದ ಶಾಸಕರಿಗಾಗಿ ಭಾರೀ ಹುಡುಕಾಟ ನಡೆಸಿದ್ದರೂ ಕೂಡ ಯಾವುದೇ ಪ್ರಯೋಜನವಾಗಿರಲಿಲ್ಲ.ಶಾಸಕರ ಪತ್ತೆಗೆ ಲೋಕಾಯುಕ್ತ ಡಿವೈಎಸ್ಪಿಗಳ ನೇತೃತ್ವದಲ್ಲಿ7 ತಂಡ ರಚಿಸಲಾಗಿತ್ತು. ವಿರೂಪಾಕ್ಷಪ್ಪ ಮತ್ತು ಅವರ ಕುಟುಂಬ ಸದಸ್ಯರ ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಅಧಿಕಾರಿಗಳ ತಂಡವು ಬೆಂಗಳೂರು, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಶೋಧ ನಡೆಸಿದ್ದವು.
ಆದರೆ ಇದೀಗ ತೆರೆಮರೆಯಲ್ಲಿದ್ದುಕೊಂಡೇ ಜಾಮೀನು ಪಡೆಯುವಲ್ಲಿ ಮಾಡಾಳ್ ಯಶಸ್ವಿಯಾಗಿದ್ದು, ಮಾಡಾಳ್ ಪರ ವಾದಿಸಿದ ಹಿರಿಯ ವಕೀಲ ಸುಮನ್ ಶಾಸಕರು ಲಂಚಕ್ಕೆ ಬೇಡಿಕೆ ಇಟ್ಟಿಲ್ಲ ಹಾಗೂ ಸ್ವೀಕರಿಸಿಲ್ಲ. ಈ ಪ್ರಕರಣದಲ್ಲಿ ಮಾಡಾಳ್ ಪಾತ್ರವಿಲ್ಲ ಎಂದಿದ್ದಾರೆ. ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ಮಾಡಾಳ್ ಗೆ ನಲವತ್ತೆಂಟು ಗಂಟೆಯೊಳಗೆ ಲೋಕಾಯುಕ್ತರ ಮುಂದೆ ಹಾಜರಿರುವಂತೆ ಸೂಚಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಆದೇಶಿಸಿದೆ.
ಇದನ್ನೂ ಓದಿ : ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
ಇದನ್ನೂ ಓದಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿಗಮ ಮಂಡಳಿಗೆ ರಾಜೀನಾಮೆ ನೀಡುವಂತೆ ಸೂಚನೆ : ಸಿಎಂ ಬೊಮ್ಮಾಯಿ
Bail for Madal Virupakshappa: Big relief for Madal Virupakshappa: Interim bail granted