Balebhare Ghat traffic advisory: ತೀರ್ಥಹಳ್ಳಿ- ಕುಂದಾಪುರ ಬಾಳೆಬರೆ ಘಾಟಿ ಮಾರ್ಗದಲ್ಲಿ ಏಪ್ರಿಲ್ 15ರ ವರೆಗೆ ಸಂಚಾರ ರದ್ದು : ಪರ್ಯಾಯ ಮಾರ್ಗ ಬಿಡುಗಡೆ

ಶಿವಮೊಗ್ಗ : (Balebhare Ghat traffic advisory) ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್‌ ಪೇವ್‌ಮೆಂಟ್‌ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುವ ಕಾರಣದಿಂದಾಗಿ ಬಾಳೆಬರೆ ಘಾಟಿ ತೀರ್ಥಹಳ್ಳಿ- ಕುಂದಾಪುರ ಮಾರ್ಗದಲ್ಲಿ ಏಪ್ರಿಲ್‌ 15ರ ವರೆಗೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಕಾರಣಕ್ಕೆ ಈ ಮಾರ್ಗದಲ್ಲಿ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ ನಲ್ಲಿ ಕಾಂಕ್ರೀಟ್‌ ಪೇವ್‌ ಮೆಂಟ್‌ ಕಾಮಗಾರಿ ನಿರ್ಮಾಣ ಕಾರ್ಯ ನಡೆಯುತ್ತಿರುವ ಕಾರಣದಿಂದಾಗಿ ಪರ್ಯಾಯ ಮಾರ್ಗದಲ್ಲಿ ಏಪ್ರಿಲ್‌ 5 ರ ವರೆಗೆ ಆದೇಶಿರುವುದನ್ನು ಹೆಚ್ಚುವರಿ ಹತ್ತು ದಿನಗಳವರೆಗೆ ಕಾಲಾವಕಾಶವನ್ನು ವಿಸ್ತರಿಸಿ ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸುವಂತೆ ಕಾರ್ಯಪಾಲಕ ಇಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಶಿವಮೊಗ್ಗ ಅವರ ಉಲ್ಲೇಖದಲ್ಲಿ ಕೋರಲಾಗಿತ್ತು. ಈ ಬಗ್ಗೆ ಪೊಲೀಸ್‌ ಅಧಿಕ್ಷಕರು ಉಡುಪಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಉಡುಪಿ ಇವರಿಂದ ವರದಿ ಪಡೆಯಲಾಗಿದ್ದು, ವರದಿಗಳನ್ವಯ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ ನಲ್ಲಿ ವಾಹನ ಸಂಚಾರ ನಿಷೇಧ ಮತ್ತು ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಹೊರಡಿಸುವ ತಾತ್ಕಾಲಿಕ ಅಧಿಸೂಚನೆಯನ್ನು ಹೆಚ್ಚುವರಿ ಹತ್ತು ದಿನಗಳವರೆಗೆ ವಿಸ್ತರಿಸಬಹುದಾಗಿ ವರದಿ ಸಲ್ಲಿಸಲಾಗಿದೆ.

ಈ ಹಿನ್ನಲೆಯಲ್ಲಿ ಕಾರ್ಯಪಾಲಕ ಇಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಶಿವಮೊಗ್ಗದ ಕೋರಿಕೆಯ ಅನ್ವಯ ವಾಹನ ಸಂಚಾರವನ್ನು ನಿಷೇಧಿಸಿ ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶ ಹೊರಡಿಸಲಾಗಿದೆ.
ರಾಜ್ಯ ಹೆದ್ದಾರಿ-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಮಾರ್ಗವಾಗಿ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ರಸ್ತೆ ಮಾರ್ಗವಾಗಿ ಹೋಗಲು ಸೂಚಿಸಲಾಗಿದೆ
ರಾಜ್ಯ ಹೆದ್ದಾರಿ-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ-ಕಾಸರಗೋಡು-ನಗರ-ಕೊಲ್ಲೂರು-ಕುಂದಾಪುರ ಮೂಲಕ ಹೋಗಲು ಸೂಚಿಸಲಾಗಿದೆ.
ತೀರ್ಥಹಳ್ಳಿ-ಯಡೂರು-ಹುಲಿಕಲ್-ಕುಂದಾಪುರ ಕಡೆ ಹೋಗುವ ಲಘು/ ಭಾರೀ ವಾಹನಗಳು ತೀರ್ಥಹಳ್ಳಿ-ಯಡೂರು-ಮಾಸ್ತಿಕಟ್ಟೆ-ನಗರ-ಕೊಲ್ಲೂರು-ಕುಂದಾಪುರ ಮೂಲಕ ಹೋಗಲು ಸೂಚಿಸಲಾಗಿದೆ.
ಹೊಸನಗರ-ಕೊಲ್ಲೂರು-ಕುಂದಾಪುರ ರಸ್ತೆಯಲ್ಲಿ ಭಾರೀ ಸರಕು ವಾಹನಗಳನ್ನು ಹೊರತುಪಡಿಸಿ ಲಘು ವಾಹನಗಳಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ : Haladi Srinivasa Shetty retires: ಹಾಲಾಡಿಯವರು ರಾಜಕೀಯ ನಿವೃತ್ತಿ ಘೋಷಿಸಿರುವುದು ಸ್ವಂತ ನಿರ್ಧಾರವೇ ? ಈ ಬಗ್ಗೆ ಜನರ ಅಭಿಪ್ರಾಯವೇನು

Balebhare Ghat traffic advisory: Tirthahalli-Kundapur Balebhare Ghat road traffic canceled till April 15: Alternative route released

Comments are closed.