ಮಂಗಳವಾರ, ಏಪ್ರಿಲ್ 29, 2025
HomekarnatakaBande mutt Sri Basavalinga Swamiji : ಹನಿಟ್ರ್ಯಾಪ್ ನಿಂದ ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ :...

Bande mutt Sri Basavalinga Swamiji : ಹನಿಟ್ರ್ಯಾಪ್ ನಿಂದ ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ : ಕಣ್ಣೂರು ಮಠದ ಸ್ವಾಮೀಜಿ, ಯುವತಿ ಅರೆಸ್ಟ್

- Advertisement -

ರಾಮನಗರ : Bande mutt Sri Basavalinga Swamiji : ಕುಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎನ್ನುವ ಆರೋಪ ಕೇಳಿಬಂದಿದೆ. ಇದೀಗ ಹನಿಟ್ರ್ಯಾಪ್ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸಲಾಗುತ್ತಿದ್ದು, ಕಣ್ಣೂರು ಮಠದ ಸ್ವಾಮೀಜಿ ಅವರನ್ನು ಬಂಧಿಸಲಾಗಿದೆ. ಅಲ್ಲದೇ ವಿಡಿಯೋ ರಿಲೀಸ್ ಮಾಡಿರುವ ತಂಡಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಬಸವಲಿಂಗ ಸ್ವಾಮೀಜಿ ಮಠದಲ್ಲಿನ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Bande mutt Sri Basavalinga Swamiji) ಮಾಡಿಕೊಂಡಿದ್ದರು. ಸ್ವಾಮೀಜಿ ಆತ್ಮಹತ್ಯೆಯ ಬೆನ್ನಲ್ಲೇ ವಿಡಿಯೋವೊಂದು ವೈರಲ್ ಆಗಿದ್ದು, ಯುವತಿಯೊಂದಿಗೆ ಸ್ವಾಮೀಜಿ ವಿಡಿಯೋ ಕಾಲ್ ಮಾಡಿರುವುದು ವಿಡಿಯೋದಲ್ಲಿತ್ತು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಅನ್ನೋ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ರಾಮನಗರ ಪೊಲೀಸರು ತನಿಖೆಯನ್ನು ಕೈಗೊಂಡಿದ್ದರು. ಹನಿಟ್ರ್ಯಾಪ್ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸಿದ್ದಾರೆ. ಈ ವೇಳೆಯಲ್ಲಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಮಠದ ಡಾ.ಮೃತ್ಯುಂಜಯ ಸ್ವಾಮೀಜಿ ಅವರ ಹೆಸರನ್ನು ಬಾಯ್ಬಿಟ್ಟಿದ್ದಾಳೆ ಎನ್ನಲಾಗುತ್ತಿದೆ.

ಇದೀಗ ಪೊಲೀಸರು ಡಾ.ಮೃತ್ಯುಂಜಯ ಸ್ವಾಮೀಜಿ ಹಾಗೂ ಯುವತಿಯನ್ನು ಬಂಧಿಸಿದ್ದು, ನಿರಂತರ ಎರಡು ಗಂಟೆಗಳ ಕಾಲ ವಿಚಾರಣೆಯನ್ನು ನಡೆಸಿದ್ದಾರೆ. ಬಸವಲಿಂಗ ಸ್ವಾಮೀಜಿ ಅವರ ಸಾವಿಗೆ ಹನಿಟ್ರ್ಯಾಪ್ ಕಾರಣವೇ ಅನ್ನೋ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಸ್ವಾಮೀಜಿಗೆ ಕೋಟ್ಯಾಂತರ ರೂಪಾಯಿಗೆ ಡಿಮ್ಯಾಂಡ್ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿಯೂ ಸೋಲ ದೇವನಹಳ್ಳಿ ಠಾಣೆಯ ಪೊಲೀಸ್ ತನಿಖೆ ನಡೆಸುತ್ತಿದ್ದಾರೆ.

ಕುಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ (Bande mutt Sri Basavalinga Swamiji)ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಡೆತ್ ನೋಟ್ ನ ಐದು ಪುಟಗಳು ನಾಪತ್ತೆಯಾಗಿದೆ. ಆದರೆ ಡೆತ್ ನೋಟ್ ನಲ್ಲಿ ಸ್ವಾಮೀಜಿ ಅವರು ಹಲವು ವ್ಯಕ್ತಿಗಳ ಹೆಸರುಗಳನ್ನು ಉಲ್ಲೇಖ ಮಾಡಿದ್ದಾರೆ. ಆದರೆ ನಮಗೆ ಸಿಕ್ಕ ಡೆತ್ ನೋಟ್ ಹಾಗೂ ವೈರಲ್ ಆಗಿರುವ ಡೆತ್ ನೋಟ್ ಪೋಟೋಗಳಿಗೂ ವ್ಯತ್ಯಾಸವಿದೆ ಎಂದು ರಾಮನಗರ ಎಸ್ ಪಿ ಸಂತೋಷ್ ಬಾಬು ಮಾಹಿತಿ ನೀಡಿದ್ದರು.

ಇದನ್ನೂ ಓದಿ : Karnataka Weather Report : ನ.2 ರಿಂದ ಮತ್ತೆ ವರುಣಾರ್ಭಟ :ಕರ್ನಾಟಕದಲ್ಲಿ Yellow Alert ಘೋಷಣೆ

ಇದನ್ನೂ ಓದಿ : Swamiji suicide: ಬಂಡೇಮಠದ ಶ್ರೀಗಳ ಆತ್ಮಹತ್ಯೆ: 3 ಪುಟಗಳ ಡೆತ್‍ನೋಟಿನಲ್ಲಿ ಸಿಕ್ಕ ಮಾಹಿತಿ ಏನು..?

Bande mutt Sri Basavalinga Swamiji suicide Kannur mutt sri and lady arrest Honey trap case

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular