ಸೋಮವಾರ, ಏಪ್ರಿಲ್ 28, 2025
HomekarnatakaBangalore -Kannur Express : ಹಳಿ ತಪ್ಪಿದ ಬೆಂಗಳೂರು - ಕಣ್ಣೂರು ಎಕ್ಸ್‌ಪ್ರೆಸ್‌ ರೈಲು :...

Bangalore -Kannur Express : ಹಳಿ ತಪ್ಪಿದ ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್‌ ರೈಲು : ತಪ್ಪಿದ ಭಾರೀ ದುರಂತ

- Advertisement -

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಕಣ್ಣೂರು – ಬೆಂಗಳೂರು ಎಕ್ಸ್‌ಪ್ರೆಸ್‌ (Bangalore -Kannur Express) ರೈಲಿನ 5 ಬೋಗಿಗಳು ಹಳಿತಪ್ಪಿದ ಘಟನೆ ಬೆಂಗಳೂರು ವಿಭಾಗದ ತೊಪ್ಪೂರು -ಶಿವಡಿ ಮಾರ್ಗದಲ್ಲಿ ನಡೆದಿದೆ. ರೈಲಿನಲ್ಲಿದ್ದ2348 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ಮಾಹಿತಿಯನ್ನು ನೀಡಿದೆ.

ಮುಂಜಾನೆ 3.50ರ ಸುಮಾರಿಗೆ ಕಣ್ಣೂರು -ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಮಾಡುತ್ತಿತ್ತು. ಈ ವೇಳೆಯಲ್ಲಿ ಮಾರ್ಗದಲ್ಲಿನ ಬಂಡೆಗಳು ಏಕಾಏಕಿಯಾಗಿ ರೈಲ್ವೆ ಹಳಿಯ ಮೇಲೆ ಬಿದ್ದಿದೆ. ಇದರಿಂದಾಗಿ ರೈಲು ಹಳಿ ತಪ್ಪಿದೆ. ಆದರೆ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ರೈಲ್ವೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ.

ಇನ್ನು ರೈಲಿನಲ್ಲಿದ್ದ ಪ್ರಯಾಣಿಕರನ್ನು ತಮ್ಮ ಊರುಗಳಿಗೆ ಸುರಕ್ಷಿತವಾಗಿ ಕಳುಹಿಸುವ ಕಾರ್ಯವನ್ನು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಎಂದು ರೈಲ್ವೆ ಇಲಾಖೆ ಮಾಹಿತಿಯನ್ನು ನೀಡಿದೆ.

ಇನ್ನು ಕಣ್ಣೂರು -ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ಬಸ್ಸುಗಳ ಮೂಲಕ ಕಳುಹಿಸುವ ಕಾರ್ಯವನ್ನು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಡುತ್ತಿದ್ದಾರೆ. ಈ ಕುರಿತು ರೈಲ್ವೆ ಇಲಾಖೆ ಮಾಹಿತಿಯನ್ನು ನೀಡಿದೆ.

ಇದನ್ನೂ ಓದಿ : Karnataka Rain ರಾಜ್ಯದ 10 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ : Yellow ಅಲರ್ಟ್

ಇದನ್ನೂ ಓದಿ : Student Bus Pass : BMTC ವಿದ್ಯಾರ್ಥಿ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭ

(Bangalore-Kannur Express 5 Coach derailed between Toppuru Sivadi)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular