Bangalore rain alert: ಕರ್ನಾಟಕದಲ್ಲಿ ನಿಲ್ಲದ ವರುಣನ ಅಬ್ಬರ : ಇನ್ನೂ 2 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Bangalore rain alert) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಮತ್ತೆ ಮುಂದುವರಿದಿದೆ. ಕರಾವಳಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ (Bangalore rain alert) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ತಮಿಳುನಾಡು ಪ್ರದೇಶಗಳಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಚಳಿಯ ವಾತಾವರಣವು ಇತ್ತು. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿದಿದ್ದು, ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಈಶಾನ್ಯ ಮಾನ್ಸೂನ್‌ ಮಾರುತದ ಕಾರಣದಿಂದಾಗಿ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು, ಹಾಗೂ ಲಕ್ಷದ್ವೀಪಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : Daughter Murdered By Father : ಸಾಲದ ಹೊರೆ ತಪ್ಪಿಸಲು ತನ್ನ 2 ವರ್ಷದ ಮಗಳನ್ನೇ ಕೊಲೆಗೈದ ಬೆಂಗಳೂರಿನ ಇಂಜಿನಿಯರ್

ಇದನ್ನೂ ಓದಿ : Voter ID scam: ಬಿಬಿಎಂಪಿ ಅಧಿಕಾರಿಗಳು ಲಂಚ ಪಡೆದಿರುವ ಆರೋಪ: ಅಧಿಕಾರಿಗಳ ಅಮಾನತು

ದಕ್ಷಿಣ ಭಾರತದ ಕೇರಳ, ಮಾಹೆ ಹಾಗೂ ಲಕ್ಷದ್ವೀಪಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಕರ್ನಾಟಕ, ತಮಿಳುನಾಡು, ಅಂಡಮಾನ್‌ ಮತ್ತು ನಿಕೋಬಾರ್‌ ಲಕ್ಷದ್ವೀಪಗಳಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ. ಪುದುಚೇರಿ, ಕಾರೈಕಲ್‌ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(Bangalore rain alert) In the background of depression in the Bay of Bengal, rain has continued in various states including Karnataka. Widespread rain is expected in the coastal district today and it is likely to continue for the next two days.

Comments are closed.