Bangalore weather: ವಿಪರೀತ ಚಳಿಗೆ ಸಿಲಿಕಾನ್ ಸಿಟಿ ತತ್ತರ: ದಶಕದ ಬಳಿಕ ಇಂದು ಅತಿ ಕಡಿಮೆ ತಾಪಮಾನ ದಾಖಲು

ಬೆಂಗಳೂರು: Bangalore weather:ಕಳೆದ ತಿಂಗಳು ಮಳೆಯಿಂದಾಗಿ ತತ್ತರಿಸಿದ್ದ ಬೆಂಗಳೂರು ಜನತೆ ಇದೀಗ ವಿಪರೀತ ಚಳಿಯಿಂದ ಹೈರಾಣಾಗಿದೆ. ಇಡೀ ದಿನ ಮೈ ಕೊರೆಯುವ ಚಳಿಯ ವಾತಾವರಣವಿದ್ದು, ಜನ ಹಾಸಿಗೆಯಿಂದ ಏಳಲು ಪರದಾಡುತ್ತಿದ್ದಾರೆ. ಬೆಳಗ್ಗಿನ ಜಾವ 8 ಗಂಟೆಯಾದರೂ ನಗರದೆಲ್ಲೆಡೆ ಮಂಜು ಕವಿದ ವಾತಾವರಣವಿದ್ದು, ರಸ್ತೆ ಕಾಣದೇ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಇಂದು ಬೆಂಗಳೂರಿನಲ್ಲಿ ಕನಿಷ್ಠ 13.9 ಡಿಗ್ರಿ ತಾಪಮಾನ ಕಂಡುಬಂದಿದೆ. ಈ ತಾಪಮಾನವು 1 ದಶಕದಲ್ಲಿ ನವೆಂಬರ್ ನಲ್ಲಿ ದಾಖಲಾದ ಕನಿಷ್ಠ ತಾಪಮಾನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ನಿನ್ನೆ ಬೆಂಗಳೂರಿನಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇಂದು ಗರಿಷ್ಠ ತಾಪಮಾನ 25.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು 14.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಈ ರೀತಿಯ ಚಳಿ ನಾಳೆಯೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Dharamsthala Lakshdeepotsava: ಧರ್ಮಸ್ಥಳ ಲಕ್ಷದೀಪೋತ್ಸವ: ಇಲ್ಲಿದೆ ಕಾರ್ಯಕ್ರಮಗಳ ವಿವರ

ಅಂದಹಾಗೆ 2012ರ ನವೆಂಬರ್ 21ರಂದು ಬೆಂಗಳೂರಿನಲ್ಲಿ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಅದಾದ ಬಳಿಕ 10 ವರ್ಷಗಳ ಬಳಿಕ ನವೆಂಬರ್ ತಿಂಗಳಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನ ಇದಾಗಿದೆ. 1967ರ ನವೆಂಬರ್ 15ರಂದು ಬೆಂಗಳೂರಿನಲ್ಲಿ 9.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಉಂಟಾಗುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿತ್ತು.

ಇದನ್ನೂ ಓದಿ: Pune Bengaluru ಹೆದ್ದಾರಿಯಲ್ಲಿ ಭೀಕರ ಅಪಘಾತ : 48 ವಾಹನಗಳು ಜಖಂ

Bangalore weather : ಬೆಂಗಳೂರಿನಲ್ಲಿ ನಾಳೆಯಿಂದ ಮಳೆ..?

ಒಂದೆಡೆ ಚಳಿಯಿಂದ ತತ್ತರಿಸುತ್ತಿರುವ ಬೆಂಗಳೂರಿನಲ್ಲಿ ನಾಳೆಯಿಂದ ಮಳೆಯಾಗುವ ಸೂಚನೆ ಸಿಕ್ಕಿದೆ. ನಾಳೆಯಿಂದ ನವೆಂಬರ್ 3 ದಿನಗಳ ಕಾಲ ಅಂದರೆ ನವೆಂಬರ್ 24ರವರೆಗೆ ಲಘು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ಕನಿಷ್ಠ ತಾಪಮಾನ 18ರಿಂದ 18 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 25ರಿಂದ 26 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Bangalore weather: At 13.9 degrees Bengaluru wakes up to November’s lowest temperature in a decade

Comments are closed.