Minister Umesh Katti : ಸಚಿವ ಉಮೇಶ್​ ಕತ್ತಿ ನಿಧನಕ್ಕೆ ಜಗದೀಶ್​ ಶೆಟ್ಟರ್​,ಬಸವರಾಜ ಹೊರಟ್ಟಿ ಸಂತಾಪ

ಹುಬ್ಬಳ್ಳಿ : Minister Umesh Katti : ಆಹಾರ, ನಾಗರಿಕ ಸರಬರಾಜು ಹಾಗೂ ಅರಣ್ಯ ಸಚಿವರಾಗಿದ್ದ ಉಮೇಶ್​ ಕತ್ತಿ ಹಠಾತ್​ ನಿಧನದಿಂದಾಗಿ ಇಡೀ ರಾಜ್ಯದಲ್ಲಿ ಶೋಕದ ವಾತಾವರಣ ಮೂಡಿದೆ. ಡಾಲರ್ಸ್​ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಉಮೇಶ್​ ಕತ್ತಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಎಂ.ಎಸ್​ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಸಹ ಅವರು ಮನೆಯಲ್ಲಿಯೇ ನಿಧನರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.

ಸಚಿವ ಉಮೇಶ್​ ಕತ್ತಿ ನಿಧನಕ್ಕೆ ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್​ ಶೆಟ್ಟರ್​ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ರಾಜ್ಯ ರಾಜಕಾರಣದಲ್ಲಿ ತಮ್ಮ ಕ್ರಿಯಾಶೀಲತೆ, ನೇರ, ನಿಷ್ಠುರತೆ ಹೆಸರಾಗಿದ್ದರು. ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.ಕತ್ತಿ ಅಕಾಲಿಕ ಅಗಲಿಕೆಯ ದುಃಖ‌ ಭರಿಸುವ ಶಕ್ತಿ ಕುಟುಂಬ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಬರಲಿ ಎಂದು ಸಂತಾಪ ಸೂಚಿಸಿದ್ದಾರೆ.

ಇತ್ತ ವಿಧಾನ ಪರಿಷತ್​ ಸದಸ್ಯ ಬಸವರಾಜ ಹೊರಟ್ಟಿ ಕೂಡ ಸಚಿವ ಉಮೇಶ್​ ಕತ್ತಿ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಮೇಶ್​ ಕತ್ತಿ ಹಾಗೂ ನಾನು ಅನೇಕ ವರ್ಷಗಳಿಂದ ಜೆಡಿಎಸ್​ ಪಕ್ಷದಕ್ಕೆ ಕೆಲಸ ಮಾಡಿದ್ದೆವು. ನನ್ನ ಬಹಳ ಆತ್ಮೀಯರಾಗಿದ್ದರು. ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದರು. ಸದಾ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಯೋಚಿಸುತ್ತಿದ್ದರು. ಇಂತವರ ಅಗಲಿಕೆಯಿಂದಾಗಿ ಉತ್ತರ ಕರ್ನಾಟಕ ಓರ್ವ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡತಾಗಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಚಿವ ಉಮೇಶ್‌ ಕತ್ತಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರೀಯೆ ನಡೆಯಲಿದ್ದು, ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದೆ. ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಮನೆಯಲ್ಲಿ ಇದ್ದ ವೇಳೆಯಲ್ಲಿಉಮೇಶ್‌ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಕುಟುಂಬಸ್ಥರು ಅವರನ್ನು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರು ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಇದನ್ನು ಓದಿ : Umesh Katti passes away : ಸಚಿವ ಉಮೇಶ್‌ ಕತ್ತಿ ವಿಧಿವಶ : ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರೀಯೆ

ಇದನ್ನೂ ಓದಿ : Ravindra Jadeja Surgery Success : ರವೀಂದ್ರ ಜಡೇಜ ಆಪರೇಷನ್ ಸಕ್ಸಸ್, ಟಿ20 ವಿಶ್ವಕಪ್ ಆಡುವುದು ಡೌಟ್

Basavaraja Horatti and Jagadish Shettar condoled the demise of Minister Umesh Katti.

Comments are closed.