BBMP Commissioner Tushar Girinath : ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಬೆನ್ನಲ್ಲೇ, ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ (BBMP Commissioner Tushar Girinath) ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ತುಷಾರ್‌ ಗಿರಿನಾಥ್‌ಗೆ ಶನಿವಾರದಿಂದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ತಮ್ಮ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜಾಸ್ತಿಯಾದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿದೆ. ನಗರದ ಕನ್ನಿಂಗ್ಹಾಮ್‌ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಚಿಲುಮೆ ಸಂಸ್ಥೆಯಿಂದ ನಡೆದ ಮತದಾರರ ದತ್ತಾಂಶ ಕಳ್ಳತನ ಪ್ರಕರಣದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮೇಲೆ ಕೂಡ ತೀವ್ರ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ಹಿನ್ನಲೆಯಲ್ಲಿ ಅವರನ್ನು ವರ್ಗಾವಣೆ ಮಾಡಲಾಗುವುದು ಎನ್ನುವ ವದಂತಿಗಳು ಹರಿದಾಡಿದ್ದವು.

ಆದರೆ ಮಹಾನಗರ ಪಾಲಿಕೆ ನೌಕರರ ಸಂಘ ಅವರನ್ನು ವರ್ಗಾವಣೆ ಮಾಡಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದೆ. ಈ ಕುರಿತಂತೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣೆ ಅಯೋಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲು ಆದೇಶಿಸಿದೆ. ಇದರಿಂದಾಗಿ ತುಷಾರ್‌ ಗಿರಿನಾಥ್‌ ಅವರನ್ನು ವರ್ಗಾವಣೆ ಮಾಡಬಾರದು. ಹಾಗೆ ಈಗಾಗಲೇ ವರ್ಗಾವಣೆಗೊಳಿಸಿದ ಇಬ್ಬರು ಅಧಿಕಾರಿಗಳ ಆದೇಶವನ್ನು ರದ್ದುಗೊಳಿಸುವಂತೆ ಸಂಘ ಆಗ್ರಹಿಸಿದೆ.

ಇದನ್ನೂ ಓದಿ : Voter Id Case: ವೋಟರ್‌ ಐಡಿ ಅಕ್ರಮ ಪ್ರಕರಣ : ಚಿಲುಮೆ ಸಂಸ್ಥೆಯ ಇಬ್ಬರು ಅರೆಸ್ಟ್, ಅಕ್ರಮದಲ್ಲಿ ಶಾಸಕರು -ಸಚಿವರ ಹೆಸರು

ಇದನ್ನೂ ಓದಿ : VOTER ID SCAM: ವೋಟರ್ ಐಡಿ ಹಗರಣ.. ಸಿದ್ದರಾಮಯ್ಯ ಕೊಟ್ರು ಕೆಜಿಎಫ್.. ಕಾಂತಾರ ಲಿಂಕ್

ಇದನ್ನೂ ಓದಿ : BL SANTOSH : ಶಾಸಕರಿಗೆ ಹಣದ ಆಮೀಷ ಕೇಸ್.. ಬಿ.ಎಲ್.ಸಂತೋಷ್ ಗೆ ನೋಟಿಸ್

ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ನಾಲ್ವರು ಅಧಿಕಾರಿಗಳ ಅಮಾನತು ಮತ್ತು ಬಂಧನ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದೆ. ಆದರೆ ಇತ್ತಕಡೆಯಲ್ಲಿ ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಅವರನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್‌ ಆಗ್ರಹಿಸಿ, ಕಾಂಗ್ರಸ್‌ ವಕ್ತಾರ ರಮೇಶ್‌ ಬಾಬು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

BBMP Commissioner Tushar Girinath’s health deteriorated: admitted to hospital

Comments are closed.