Belagavi Winter Session : ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ : ಮತಾಂತರ ನಿಷೇಧ ಕಾಯ್ದೆ ಮಂಡನೆ ಸಿಎಂ ಬೊಮ್ಮಾಯಿ

ಬೆಳಗಾವಿ : ಇಂದಿನಿದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಬೆಳಗಾವಿ ಅಧಿವೇಶನದಲ್ಲೇ ( Belagavi Winter Session ) ವಿವಾದಿತ ಮತಾಂತರ ನಿಷೇಧ ವಿಧೇಯಕ ( Conversion Prohibition Act )ಮಂಡನೆ ಮಾಡಲಾಗುವುದು. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಆ ಹಿನ್ನೆಲೆಯಲ್ಲಿಯೇ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ( CM Basavaraj Bommai )ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ರ‍್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯದ ನಾಯಕರಿಗೆ ನಾನು ಹೇಳಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ ಎಂದಿದ್ದಾರೆ. ಇನ್ನು ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಮಾಡ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಮಂಡನೆ ಖಚಿತ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾನೂನು ಮಂಡನೆ ಮಾಡುತ್ತೇವೆ. ರಾಜ್ಯದಲ್ಲಿ ಬಲವಂತದ ಮತಾಂತರ ತಡೆಯಬೇಕಾಗಿದೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತಿದ್ದೇವೆ. ವಿಪಕ್ಷಗಳ ಆರೋಪ ಯಾವುದೇ ಕಣ್ಣೊರೆಸುವ ತಂತ್ರವಲ್ಲ ಎಂದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಕೊರೊನಾ ಹಾಗೂ ಓಮಿಕ್ರಾನ್‌ ಭೀತಿಯ ಹಿನ್ನೆಲೆಯಲ್ಲಿ ಬೆಳಗಾವಿ ವಿಧಾನಸೌದದ ಒಳಗೆ ಹಾಗೂ ಹೊರಗೆ ಸ್ಯಾನಿಟೈಸೇಜನ್‌ ಮಾಡಲಾಗಿದೆ. ಕೋವಿಡ್‌ ಮಾರ್ಗಸೂಚಿಯ ಅನ್ವಯ ಸದನದ ಕಾರ್ಯ ಕಲಾಪಗಳು ನಡೆಯಲಿವೆ. ಅದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಖುದ್ದು ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಅವರೇ ಆಗಮಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದ್ದರು.

ಈ ಹಿಂದೆ ವಿಧಾನ ಸಭಾ ಅಧಿವೇಶನ ಕೊನೆಯ ಹೊತ್ತಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಕರ್ನಾಟಕ ಧಾರ್ಮಿಕ ಕಟ್ಟಡ (ಸಂರಕ್ಷಣೆ) ವಿಧೇಯಕ 2021ನ್ನು ಮಂಡಿಸಲಾಗಿತ್ತು. ಇದೇ ರೀತಿಯಲ್ಲಿಯೇ ಈ ಬಾರಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಭದ್ರತೆಗಾಗಿ 4 ಸಾವಿರ‌ ಪೊಲೀಸ್‌ ಸಿಬ್ಬಂದಿ ನಿಯೋಜನೆ

ಒಟ್ಟು ಹತ್ತು ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನದ ಭದ್ರತೆಗಾಗಿ ಸುಮಾರು‌ 4 ಸಾವಿರ‌ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.15 ಪೊಲೀಸ್‌ ವರಿಷ್ಠಾಧಿಕಾರಿಗಳು, 40 ಡಿವೈಎಸ್‌ಪಿ, 200 ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಅಲ್ಲದೇ ಅಧಿವೇಶನಕ್ಕಾಗಿ ಆಗಮಿಸುವವರಿಗಾಗಿ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ : Kashi Vishwanath corridor : ಕಾಶಿ ವಿಶ್ವನಾಥನ ಸನ್ನಿಧಿಗೆ ಹೈಟೆಲ್‌ ಸ್ಪರ್ಶ : ಕಾಶಿ ವಿಶ್ವನಾಥ ಕಾರಿಡಾರ್‌ ಇಂದು ಮೋದಿ ಲೋಕಾರ್ಪಣೆ

ಇದನ್ನೂ ಓದಿ : Miss Universe 2021 Harnaaz Sandhu: ಭಾರತದ ಹರ್ನಾಜ್ ಸಂಧುಗೊಲಿದ ಮಿಸ್ ಯುನಿವರ್ಸ್ 2021 ಪ್ರಶಸ್ತಿ; 21 ವರ್ಷಗಳ ನಂತರ ಈ ಸಾಧನೆ

ಇದನ್ನೂ ಓದಿ : Byadarahalli Suicide Case : ಬ್ಯಾಡರಹಳ್ಳಿ ಐವರ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : FSL ವರದಿಯಿಂದ ಸ್ಪೋಟಕ ಮಾಹಿತಿ

( Belagavi Winter Session: Conversion Prohibition Act implementation : cm Basavaraj Bommai)

Comments are closed.