ಜಗದೀಶ್‌ ಶೆಟ್ಟರ್‌ ರಾಜೀನಾಮೆ, ಬಿಜೆಪಿ ವರಿಷ್ಠರ ಸಭೆ ಅಂತ್ಯ

ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಜಗದೀಶ್‌ ಶೆಟ್ಟರ್‌ (Jagadish Shettar) ರಾಜೀನಾಮೆಯ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ ನಡೆದಿದೆ. ಸಿಎಂ ಬಸವರಾಜ್‌ ಬೊಮ್ಮಾಯಿ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಸಂಸದ ಪ್ರಹ್ಲಾದ್‌ ಜೋಷಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಜಗದೀಶ್‌ ಶೆಟ್ಟರ್‌ ಅವರ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು, ಜಗದೀಶ್‌ ಶೆಟ್ಟರ್‌ ಅವರು ಪಕ್ಷದ ಹಿರಿಯ ನಾಯಕರು. ಜನಸಂಘದ ಕಾಲದಿಂದಲೂ ಅವರು ಪಕ್ಷ ಸಂಘಟನೆಗಾಗಿ ಶ್ರಮಿಸಿದ್ದಾರೆ. ಅವರಿಗೆ ಉನ್ನತ ಸ್ಥಾನಮಾನ ನೀಡುವುದಾಗಿ ಹೇಳಿದ್ದೇವೆ. ಜಗದೀಶ್‌ ಶೆಟ್ಟರ್‌ ಹೇಳಿದವರಿಗೆ ಟಿಕೆಟ್‌ ನೀಡುವ ಭರವಸೆಯನ್ನೂ ನೀಡಿದ್ದೇವು ಆದರೆ ಅವರು ಯಾವುದಕ್ಕೂ ಒಪ್ಪಲಿಲ್ಲ ಎಂದಿದ್ದಾರೆ.

ನಮ್ಮ ಯಾವುದೇ ಭರವಸೆಗೂ ಅವರು ಒಪ್ಪಿಗೆ ನೀಡಲಿಲ್ಲ. ಜಗದೀಶ್‌ ಶೆಟ್ಟರ್‌ (Jagadish Shettar) ಅವರ ರಾಜೀನಾಮೆ ನಮಗೆ ಕಸಿವಿಸಿ ತಂದಿದೆ. ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಕೂಡ ರಾಜೀನಾಮೆ ನೀಡಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದ್ದಾರೆ. ಎರಡನೇ ಹಂತದ ಲಿಂಗಾಯತ ನಾಯಕತ್ವಕ್ಕೆ ಆಧ್ಯತೆ ನೀಡಲಾಗುತ್ತಿದೆ. ಭಾರತೀಯ ಜನತಾ ಪಕ್ಷ ಶಕ್ತವಾಗಿದೆ. ಇಂತಹ ಹಲವು ಪ್ರಸಂಗಗಳನ್ನು ಎದುರಿಸಿದೆ ಎಂದಿದ್ದಾರೆ. ಇದನ್ನೂ ಓದಿ : Jagadish Shettar‌ Resigns : ಬಿಜೆಪಿಗೆ ಗುಡ್‌ಬೈ ಹೇಳಿದ ಜಗದೀಶ್‌ ಶೆಟ್ಟರ್‌; ಬಿಜೆಪಿ ಪಕ್ಷ, ಶಾಸಕ ಸ್ಥಾನಕ್ಕೆ ರಾಜೀನಾಮೆ

ಶಾಸಕ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ ‌

ಬಿಜೆಪಿಯ ಹಿರಿಯ ಮುಖಂಡ, ಮಾಜಿಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಇಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಶಿರಸಿಗೆ ತೆರಳಿದ್ದಾರೆ. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆಯನ್ನು ಸಲ್ಲಿಸಲಿದ್ದು, ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರನ್ನು ಭೇಟಿಯಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರದಲ್ಲಿ ತನ್ನ ಬೆಂಬಲಿಗರ ಜೊತೆಗೆ ಚರ್ಚಿಸಿ ನನ್ನ ಮುಂದಿನ ತೀರ್ಮಾನವನ್ನು ಕೈಗೊಳ್ಳುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಇನ್ನೊಂದೆಡೆಯಲ್ಲಿ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದೀಗ ರಾಹುಲ್‌ ಗಾಂಧಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಇಂದು ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ : ಬಿಜೆಪಿ ಕೈಕೊಟ್ಟ ಲಕ್ಷ್ಮಣ್ ಸವದಿಗೆ ಅಥಣಿಯಿಂದಲೇ ಕಾಂಗ್ರೆಸ್ ಟಿಕೆಟ್

Comments are closed.