ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಇಳಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆಯನ್ನು ಮಾಡುತ್ತಿದೆ. ಇದೀಗ ಉಪನೋಂದಣಾಧಿಕಾರಿಗಳ ಕಚೇರಿ ಹಾಗೂ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಲಾಕ್ ಡೌನ್ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರಿಜಿಸ್ಟ್ರಾರ್ ಹಾಗೂ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಬಾರಿ ಹೊಡೆತ ಬಿದ್ದಿತ್ತು. ಇದೀಗ ರಾಜ್ಯದ ಎಲ್ಲಾ ರಿಜಿಸ್ತ್ರಾರ್ ಕಛೇರಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದು, ಕೊರೊನಾ ಮಾರ್ಗಸೂಚಿ ಅನುಸರಿಸಿ ರಿಜಿಸ್ಟ್ರಾರ್ ಕಛೇರಿಗಳನ್ನು ಓಪನ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ರಿಜಿಸ್ಟ್ರಾರ್ ಹಾಗೂ ಉಪನೊಂದಣಿ ಕಛೇರಿ ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.