BJP foundation day 2023 : ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮೋದಿ ಕಾರ್ಯಕ್ರಮ ವೀಕ್ಷಣೆ

ಬೆಂಗಳೂರು : (BJP foundation day 2023) ರಾಷ್ಟ್ರೀಯ ಪಕ್ಷ ಬಿಜೆಪಿ ಇಂದು ಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ಧ್ವಜವನ್ನು ಹಾರಿಸಿ ಭಾರತಮಾತೆಗೆ ಪುಷ್ಪಾರ್ಚನೆಯನ್ನು ಸಲ್ಲಿಸಿದ ಬಳಿಕ ಮೋದಿ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌, ಮುಖ್ಯಮಂತ್ರಿಗಳಾದ ಬಿಎಸ್‌ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿವೈ ಯಡಿಯೂರಪ್ಪ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌, ಪ್ರಹ್ಲಾದ್‌ ಜೋಶಿ ಹಾಗೂ ಬಿಜೆಪಿಯ ಅನೇಕ ಸಚಿವರು, ಸಂಸದರು, ಶಾಸಕರು, ರಾಜ್ಯ ಪಧಾದಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಇದಲ್ಲದೇ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ಮೋದಿ ಅವರು ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕಾರ್ಯಕ್ರಮವನ್ನು ಕೂಡ ಬಿಜೆಪಿ ಕಚೇರಿಯಲ್ಲಿ ವೀಕ್ಷಿಸಿದರು.

ಭಾರತೀಯ ಜನತಾ ಪಾರ್ಟಿ ಪಕ್ಷ ಸ್ಥಾಪನೆಗೊಂಡು ಇಂದಿಗೆ 43 ವರ್ಷಗಳು ಕಳೆದಿವೆ. ಭಾರತದ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿ 1980 ರಿಂದ ಕಾರ್ಯ ನಿರ್ವಹಿಸಿಕೊಂಡು ಬಂದಿದ್ದು, ಹಲವರ ಶ್ರಮದಿಂದ ಇಂದು ಪ್ರಮುಖ ರಾಷ್ಟ್ರೀಯ ಪಕ್ಷವಾಗಿ ಬೆಳೆದು ನಿಂತಿದೆ. ಪ್ರಸ್ತುತ ರಾಜಕೀಯ ನಡೆಯಲ್ಲಿ ಬಿಜೆಪಿ ಪ್ರಧಾನ ನೆಲೆಯನ್ನು ಕಂಡುಕೊಂಡಿದ್ದು, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷ ಪ್ರಬಲರಲ್ಲಿ ಪ್ರಬಲವಾಗಿ ಹೊರಹೊಮ್ಮಿದೆ.

ಇದನ್ನೂ ಓದಿ : Bandipur Narendra Modi Visit : ಏ. 9ಕ್ಕೆ ಬಂಡೀಪುರಕ್ಕೆ ಮೋದಿ ಭೇಟಿ: ಇಂದಿನಿಂದ 4 ದಿನ ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

ಬಿಜೆಪಿ ಪಕ್ಷ ಬೀಜವಾಗಿ ಮೊಳಕೆಯೊಡೆದು ಇಂದು ಒಂದು ಹೆಮ್ಮರವಾಗಿ ದೇಶದಲ್ಲಿ ಭದ್ರತೆಯನ್ನು ಕಂಡುಕೊಂಡಿದೆ. ಹಿಂದುತ್ವದ ಒಂದು ಸಿದ್ದಾಂತವನ್ನು ಪ್ರತಿಪಾದಿಸಿದ ಬಿಜೆಪಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲು ಕರೆ ನೀಡುವ ಮೂಲಕ ಮುಸ್ಲಿಂ ವಿರೋಧಿ ಭಾವನೆಗಳನ್ನು ಬಂಡವಾಳವಾಗಿಟ್ಟುಕೊಂಡು ಚುನಾವಣೆಯಲ್ಲಿ ಯಶಸ್ಸನ್ನು ಗಳಿಸಲು ಪ್ರಾರಂಭಿಸಿತು. 1996 ರ ಚುನಾವಣೆಯಲ್ಲಿ ಬಿಜೆಪಿ ಲೋಕಸಭೆಯಲ್ಲಿ ಅತಿ ದೊಡ್ಡ ಹಾಗೂ ಏಕೈಕ ಪಕ್ಷವಾಗಿ ಹೊರಹೊಮ್ಮಿದ್ದು, ಭಾರತದಲ್ಲಿ ಸರಕಾರ ರಚಿಸಲು ಬಿಜೆಪಿಗೆ ಕರೆ ನೀಡಲಾಯಿತು. ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಅಟಲ್‌ ಬಿಹಾರಿ ಅವರು ಭಾರತದ ಪ್ರಧಾನಿಯಾದರು. ಇದಾದ ಬಳಿಕ ಒಂದೊಂದೆ ಹಂತದಲ್ಲಿ ಬಿಜೆಪಿ ಪಕ್ಷ ಗೆಲುವನ್ನು ಸಾಧಿಸಿ ಇಂದು ದೇಶದಲ್ಲೇ ಪ್ರಬಲವಾದ ಪಕ್ಷ ಎಂದೆನಿಸಿಕೊಂಡಿದೆ.

BJP foundation day 2023 : Modi program observation at state BJP office

Comments are closed.