ಸುಳ್ಯ : ಶಾಂತವಾಗಿದ್ದ ಕರಾವಳಿಯಲ್ಲೀಗ ನೆತ್ತರು ಹರಿದಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru murder) ಎಂಬವರನ್ನುದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಘಟನೆಯಿಂದಾಗಿ ಕರಾವಳಿ ಬೆಚ್ಚಿ ಬಿದ್ದಿದ್ದು, ಸಿಎಂ ಬೊಮ್ಮಾಯಿ ಘಟನೆಯನ್ನು ಖಂಡಿಸಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆ ಪೇಟೆಯಲ್ಲಿ ನಿಂತಿದ್ದ ವೇಳೆಯಲ್ಲಿ ಕೇರಳ ರಿಜಿಸ್ಟ್ರೇಷನ್ ಆಗಿರೋ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಕೂಡಲೇ ಪ್ರವೀಣ್ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಬೆಳ್ಳಾರೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಯಾರು ಈ ಪ್ರವೀಣ್ ನೆಟ್ಟಾರು ?
ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರು ಬಿಜೆಪಿಯ ಯುವ ಮುಖಂಡ. ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಪ್ರವೀಣ್ ಈ ಭಾಗದಲ್ಲಿ ಸಾಕಷ್ಟು ಪ್ರಭಾವವನ್ನು ಹೊಂದಿದ್ದರು. ಕೋಳಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ನಡೆಸಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿರ ಬಹುದು ಎಂದು ಶಂಕಿಸಲಾಗುತ್ತಿದೆ.
ಬಿಜೆಪಿ ಯುವ ಮುಖಂಡನ ಹತ್ಯೆ ನಡೆಯುತ್ತಲೇ ಕರಾವಳಿ ಬೂದಿ ಮುಚ್ಚಿದ ಕೆಂಡದಂತಿದೆ. ಯುವ ನಾಯಕನ ಹತ್ಯೆಯ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿ ಘಟನೆಯನ್ನು ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಘಟನೆಯನ್ನು ಖಂಡಿಸಿದ ಸಿಎಂ ಬೊಮ್ಮಾಯಿ
ಕರಾವಳಿ ಭಾಗದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಖಂಡಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂತಹ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಆತ್ಮಹತ್ಯೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
— Basavaraj S Bommai (@BSBommai) July 26, 2022
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5
ಇದನ್ನೂ ಓದಿ : Leopards Fear : ಶಿರಿಯಾರ ಭಾಗದಲ್ಲಿ ಚಿರತೆ ಕಾಟ, ಆತಂಕದಲ್ಲಿ ಜನತೆ
ಇದನ್ನೂ ಓದಿ : Youth dies : ಕಬಡ್ಡಿ ಆಡುತ್ತಿರುವಾಗಲೇ ಹಾರಿ ಹೋಯ್ತು ವಿದ್ಯಾರ್ಥಿಯ ಪ್ರಾಣ ಪಕ್ಷಿ: ಮನಕಲುಕುತ್ತೆ ಯುವಕನ ಕೊನೆಕ್ಷಣದ ವಿಡಿಯೋ
bjp leader praveen nettaru murder in mangalur, cm bommai tweet who is Praveen nettaru