ST reservation:ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಸುಳಿವು ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ

ಬೆಂಗಳೂರು :ST reservation : ಇಂದು ಬಿಜೆಪಿ ಕೋರ್​ ಕಮಿಟಿ ಸಭೆ ನಡೆದಿದ್ದು ಈ ಸಭೆಯಲ್ಲಿ ಎಸ್​.ಟಿ ಮೀಸಲಾತಿ ಪ್ರಮಾಣ ಹೆಚ್ಚಳದ ಕುರಿತು ಚರ್ಚೆ ನಡೆಸಿದ್ದೇವೆ. ಈ ಚರ್ಚೆಯಲ್ಲಿ ಎಸ್​.ಟಿ ಮೀಸಲಾತಿ ಪ್ರಮಾಣ ಹೆಚ್ಚಳದ ಕುರಿತಾಗಿ ಅಕ್ಟೋಬರ್​ ಒಂಬತ್ತರ ಒಳಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿಯು ಎಂದಿಗೂ ಎಸ್​ಟಿ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಕಾರ್ಯವನ್ನು ಮಾಡಿದೆ. ಹೀಗಾಗಿ ಸಭೆಯಲ್ಲಿಯೂ ಕೂಡ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿದ್ದೇವೆ. ಅಕ್ಟೋಬರ್​ 9ರಂದು ವಾಲ್ಮೀಕಿ ಜಯಂತಿಯಿದೆ. ಹೀಗಾಗಿ ವಾಲ್ಮೀಕಿ ಜಯಂತಿಯ ಒಳಗಾಗಿ ಸದಾಶಿವ ಆಯೋಗದ ವರದಿಯನ್ನು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಬಳಿ ಮನವಿ ಮಾಡಿದ್ದೇವೆ ಎಂದು ಹೇಳಿದರು.


ಎಸ್ಟಿ ಮೀಸಲಾತಿ ಬಗ್ಗೆ ಅಧ್ಯಯನ ಮಾಡಲು ಸಮಿತಿ ರಚನೆ ಮಾಡಲಾಗಿದೆ. ಅಲ್ಲದೇ ಎಸ್ಸಿ ಸಮುದಾಯದ ಮೀಸಲಾತಿ ಹೆಚ್ಚಳದ ಬಗ್ಗೆಯೂ ಚರ್ಚೆಯನ್ನು ನಡೆಸಿದ್ದೇವೆ. ಆದರೆ ಮೀಸಲಾತಿ ಹೆಚ್ಚಳ ಎಷ್ಟರ ಪ್ರಮಾಣದಲ್ಲಿ ಮಾಡಬೇಕು ಎಂಬುದರ ಬಗ್ಗೆ ಅಂತಿಮ ನಿರ್ಧಾರ ಸಿಎಂ ಬೊಮ್ಮಾಯಿ ಕೈಗೊಳ್ಳುತ್ತಾರೆ. ಇದರ ಜೊತೆಯಲ್ಲಿ ಒಬಿಸಿ, ಎಸ್ಟಿ ಎಸ್ಸಿ ಮಹಿಳಾ ಸಮಾವೇಶದ ಬಗ್ಗೆಯೂ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.


ಕಾಂಗ್ರೆಸ್​ನ ಭಾರತ್​ ಜೋಡೋ ಯಾತ್ರೆಯ ಬಗ್ಗೆಯೂ ಇದೇ ವೇಳೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಹಾಗೂ ಹೆದರಿಕೆ ಇವು ಒಂದಕ್ಕೊಂದು ಸಂಬಂಧವೇ ಇಲ್ಲ. ನಾವು ಕಾಂಗ್ರೆಸ್​ಗೆ ಹೆದರಿಕೊಳ್ಳಲು ಅವರೇನು ದೈವಗಳಾ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನು ಓದಿ : India flies to Australia for T20 World Cup: ಮಿಷನ್ ವರ್ಲ್ಡ್ ಕಪ್: ಆಸ್ಟ್ರೇಲಿಯಾಗೆ ಹಾರಿದ ಟೀಮ್ ಇಂಡಿಯಾದಲ್ಲಿ ಒಬ್ಬ ಆಟಗಾರ ಮಿಸ್ಸಿಂಗ್

ಇದನ್ನೂ ಓದಿ : India vs South Africa 1st ODI: ಪದಾರ್ಪಣೆಯ ಪಂದ್ಯದಲ್ಲೇ ಭಾರತವನ್ನು ಸೋಲಿಸಿದ ಧೋನಿ ಶಿಷ್ಯ

BJP National General Secretary CT Ravi hinted about the increase in ST reservation

Comments are closed.