ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆಹೊತ್ತು ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel Resign) ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಸಂಜೆ ಅಥವಾ ನಾಳೆ ಬೆಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿರುವ ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ.

ರಾಜ್ಯಾಧ್ಯಕ್ಷರಾಗಿ ನಳಿನ್‌ ಕುಮಾರ್‌ ಕಟೀಲು ಬಿಜೆಪಿ ಸಂಘಟನೆ ಮಾಡುವಲ್ಲಿ ವಿಫಲರಾಗಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಸರಕಾರವನ್ನು ಸಮರ್ಥನೆ ಮಾಡಿಕೊಳ್ಳುವಲ್ಲಿ ಸಾಧ್ಯವಾಗಿಲ್ಲ. ಇನ್ನು ನಳಿನ್‌ ಕುಮಾರ್‌ ಕಟೀಲು ಅವರು ಆಡಿದ ಕೆಲವು ಮಾತುಗಳೇ ಬಿಜೆಪಿ ಸರಕಾರಕ್ಕೆ ಮುಳುವಾಗಿ ಪರಿಣಮಿಸಿದೆ. ಬಿಜೆಪಿಯ ಹಿರಿಯ ಮುಖಂಡರು ಪಕ್ಷ ತೊರೆದಾಗಲು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾವಿಸುವಲ್ಲಿ ನಳಿನ್‌ ಕುಮಾರ್‌ ಕಟೀಲು ಸಫಲರಾಗಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ.

ಸಾಮಾನ್ಯವಾಗಿ ಯಾವುದೇ ರಾಜಕೀಯ ಪಕ್ಷ ಸೋತಾಗ ಆ ಪಕ್ಷಗಳ ನಾಯಕರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಾರೆ. ಈ ಹಿನ್ನೆಲೆಯಲ್ಲಿಯೇ ನಳಿನ್‌ ಕುಮಾರ್‌ ಕಟೀಲು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018 ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದು ಸದನದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾಗಿರುವ ಆರೋಗ್ಯ ಸಚಿವ ಡಾ.ಸುಧಾಕರ್‌ ಸೋಲನ್ನು ಕಂಡಿದ್ದರೆ, ಗೋವಿಂದ ಕಾರಜೋಳ, ಸಿ.ಟಿ.ರವಿ, ಬಿ. ಶ್ರೀ ರಾಮುಲು, ವಿ. ಸೋಮಣ್ಣ (ಎರಡೂ ಕ್ಷೇತ್ರ ), ಜೆ. ಸಿ ಮಾಧುಸ್ವಾಮಿ, ಶಂಕರ ಪಾಟೀಲ ಮುನೇನ ಕೊಪ್ಪ, ಹಾಲಪ್ಪ ಆಚಾರ್‌, ಆರ್‌. ಆಶೋಕ (ಕನಕಪುರ ಸೋಲು), ನಾರಾಯಣ ಗೌಡ, ಬಿ.ಸಿ.ನಾಗೇಶ್‌, ಮುರುಗೇಶ ನಿರಾಣಿ, ಎಂ.ಟಿ.ಬಿ.ನಾಗರಾಜ್‌ ಹಾಗೂ ಮಾಜಿ ಸ್ಪೀಕರ್‌ ವಿಶ್ವೇಶ್ವರ ಕಾಗೇರಿ ಸೋಲನ್ನು ಕಂಡಿದ್ದಾರೆ.

ಇದನ್ನೂ ಓದಿ : Karnataka Election Result 2023 : ಉಡುಪಿ ಜಿಲ್ಲೆಯಲ್ಲಿ ಖಾತೆ ತೆರೆಯದ ಕಾಂಗ್ರೆಸ್, ಐದು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ

ಇದನ್ನೂ ಓದಿ : Karnataka Election Result : ಬಿಜೆಪಿಯಲ್ಲಿ ಸೋಲು ಕಂಡ ಪ್ರಭಾವಿ ನಾಯಕರು

BJP state President Nalin Kumar Kateel Resign

Comments are closed.