ತುಮಕೂರು : ಖಾಸಗಿ ಬಸ್ ಪಲ್ಟಿಯಾಗಿ (Bus Accident 🙂 8 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿಯಲ್ಲಿ ನಡೆದಿದೆ. ಗಾಯಾಳುಗಳನ್ನುಪಾವಗಡ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ತುಮಕೂರು ಎಸ್‌ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ.

ಶ್ರೀನಿವಾಸಮೂರ್ತಿ ಎಂಬವರಿಗೆ ಸೇರಿದ ಎಸ್‌ವಿಟಿ ಬಸ್ ಪಾವಗಡ ಹಾಗೂ ವೈ.ಎನ್. ಕೋಟೆ ನಡುವೆ ಸಂಚಾರ ನಡೆಸುತ್ತಿತ್ತು. ಜನರನ್ನು ತುಂಬಿಸಿಕೊಂಡು ಬರುತ್ತಿದ್ದ ವೇಳೆಯಲ್ಲಿ ಓವರ್ ಲೋಡ್ ಆಗಿ ಬಸ್ ಪಲ್ಟಿಯಾಗಿದೆ. ಬಸ್ಸಿನ ಮೇಲೆ ಸುಮಾರು 40 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡವರ ಪೈಕಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದಾರೆ.

ಚಾಲಕನ ಅಜಾಗರೂಕತೆಯಿಂದ ಪಲ್ಟಿಯಾಗಿದ್ದು, ಹಲವರು ಬಸ್ಸಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸದ್ಯ ಗಾಯಾಳುಗಳನ್ನು ಪಾವಗಡ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಬೆಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿದೆ.
ಇದನ್ನೂ ಓದಿ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಸ್ಯಾಂಡಲ್ ವುಡ್ ಖ್ಯಾತ ನಟಿ ಸಹೋದರ ಅರೆಸ್ಟ್
ಇದನ್ನೂ ಓದಿ : ಮದುವೆಯಾಗೋಣ ಎಂದು ಕರೆದು ಪೆಟ್ರೋಲ್ ಸುರಿದು ಬೆಂಕಿ ಇಟ್ಟ : ಪ್ರೇಮಿಯ ಹುಚ್ಚಾಟಕ್ಕೆ ತಹಶೀಲ್ದಾರ ಪುತ್ರಿ ಬಲಿ
( Private Bus Accident in Tumakuru Palavalli Katte 8 Passengers Dead many injured)