ಇನ್ಮುಂದೆ ಕಾರ್, ಬೈಕ್‍ನಲ್ಲಿ ಒಬ್ಬರೇ ಪ್ರಯಾಣಿಸಿದ್ರೂ ಮಾಸ್ಕ್ ಕಡ್ಡಾಯ

ಬೆಂಗಳೂರು : ಕಾರು ಹಾಗೂ ಬೈಕ್ ನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೂ ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೇಕು. ನಿಯಮ ಪಾಲನೆ ಮಾಡದೇ ಇದ್ರೆ ಭಾರಿ ದಂಡ ಬೀಳುವುದು ಗ್ಯಾರಂಟಿ.

ಹೌದು, ಕಾರು ಹಾಗೂ ಬೈಕ್ ನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ರೆ ಮಾಸ್ಕ್ ಧರಿಸುವುದಕ್ಕೆ ಈ ಹಿಂದೆ ವಿನಾಯಿತಿಯನ್ನು ನೀಡಲಾಗಿತ್ತು. ಆದ್ರೆ ಇನ್ಮುಂದೆ ಕಾರು ಹಾಗೂ ಬೈಕಿನಲ್ಲಿ ಒಬ್ಬರೇ ಇದ್ದಾಗಲೂ ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೇಕು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಮಾಸ್ಕ್ ಧರಿಸುವ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸ್ಪಷ್ಟ ಆದೇಶ ಹೊರಡಿಸಿದ್ದು, ತಿನ್ನುವಾಗ, ಕುಡಿಯುವಾಗ, ಈಜುವಾಗ ಮಾತ್ರ ಮಾಸ್ಕ್ ಧರಿಸುವುದರಿಂದ ವಿನಾಯಿತಿ ನೀಡಲಾಗಿದೆ. ಒಬ್ಬರಿಗಿಂತ ಹೆಚ್ಚು ಜನ ನಿಂತು ಮಾತನಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಮಾಸ್ಕ್ ಧಾರಣೆ ಬಗ್ಗೆ ಜಾಗೃತಿ ಮೂಡಿಸಲು ವಾರ್ಡ್ ವಾರು, ವಲಯವಾರು ಸಮಿತಿ ರಚಿಸಲು ಆದೇಶಿಸಲಾಗಿದೆ. ಈ ಮೂಲಕ ಮಾಸ್ಕ್ ಹಾಗೂ ಸಾಮಜಿಕ ಅಂತರ ಸೇರಿದಂತೆ ಕೊರೊನಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದಿದ್ದಾರೆ.

Comments are closed.