ಭಾನುವಾರ, ಏಪ್ರಿಲ್ 27, 2025
HomeCrimeChaitra Kundapura Case : ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಅಭಿನವ ಹಾಲಶ್ರೀ ಸ್ವಾಮೀಜಿ...

Chaitra Kundapura Case : ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಅಭಿನವ ಹಾಲಶ್ರೀ ಸ್ವಾಮೀಜಿ ಅರೆಸ್ಟ್‌

- Advertisement -

ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govinda Babu Poojari)  ಅವರಿಗೆ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaitra Kundapura Case) ಈಗಾಗಲೇ ಅರೆಸ್ಟ್‌ ಆಗಿದ್ದಾಳೆ. ಇದೀಗ ಚೈತ್ರಾ ಕುಂದಾಪುರ ಗ್ಯಾಂಗಿನ ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ (Abhinava Halashree Swamiji) ಸ್ವಾಮೀಜಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಿಜೆಪಿ ಟಿಕೆಟ್‌ ಹಗರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿ ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಅಪರಾಧ ನಿಗ್ರಹ ದಳದ ಪೊಲೀಸರು ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಒಡಿಶಾದ ಕಟಕ್‌ನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಬಂಧಿಸಿದ್ದರು.

Chaitra Kundapura Case Abhinava Halashree Swamiji Arrest CCB Police In Odisha
Image Credit To Original Source

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ತನಗೆ ವಂಚನೆ ಆಗಿರುವ ಕುರಿತು ಪ್ರಕರಣ ದಾಖಲು ಮಾಡಿದ್ದರು. ನಂತರದಲ್ಲಿ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಅವರನ್ನು ಅರೆಸ್ಟ್‌ ಮಾಡುವ ಮೊದಲೇ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು.

ಇದನ್ನೂ ಓದಿ : ಬಿಜೆಪಿ ಎಂಎಲ್‌ಎ ಟಿಕೆಟ್‌ ವಂಚನೆ ಪ್ರಕರಣ : ಚೈತ್ರಾ ಕುಂದಾಪುರ ಅರೆಸ್ಟ್

ಕಳೆದ ಮೂರು ದಿನಗಳ ಹಿಂದೆಯೇ ಸ್ವಾಮೀಜಿ ಅವರ ಖಾಸಗಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆಯಲ್ಲಿ ಸ್ವಾಮೀಜಿ ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡಿದ್ದು ಹೋಗಿದ್ದಾರೆ. ಅವರು ಮೈಸೂರಿಗೆ ಹೋಗಿದ್ದಾರೆಂಬ ಮಾಹಿತಿಯನ್ನು ನೀಡಿದ್ದ.

ಕೂಡಲೇ ಪೊಲೀಸರು ಮೈಸೂರಿಗೆ ತೆರಳಿದ್ದಾರೆ. ಆದರೆ ಅಷ್ಟರಲ್ಲಾಗಲೇ ಹಾಲಶ್ರೀ ಸ್ವಾಮೀಜಿ ಸ್ಥಳದಿಂದ ಕಾಲ್ಕತ್ತಿದ್ದರು. ಪದೇ ಪದೇ ವಾಸ್ತವ್ಯದ ಸ್ಥಳವನ್ನು ಬದಲಾಯಿಸುತ್ತಲೇ ಇದ್ದ ಹಾಕಶ್ರೀ ಸ್ವಾಮೀಜಿ ಟೀ ಶರ್ಟ್‌ ಪ್ಯಾಂಟ್‌ ಧರಿಸಿಕೊಂಡು ಓಡಾಡುತ್ತಿದ್ದರು ಎನ್ನಲಾಗುತ್ತಿದೆ.

ಅಂತಿಮವಾಗಿ ಪೊಲೀಸರು ಒಡಿಶಾದ ಕಟಕ್‌ನಲ್ಲಿರುವ ಬೌದ್ದಗಯಾಕ್ಕೆ ತೆರಳುವ ರೈಲಿನಲ್ಲಿ ಸ್ವಾಮೀಜಿ ಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಕಟಕ್‌ ನಿಂದ ಸಿಸಿಬಿ ಪೊಲೀಸರು ಸ್ವಾಮೀಜಿಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ :  ಗೃಹಿಣಿಯರಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ , ಖಾತೆಗೆ 4000ರೂ. ಜಮೆ

ಸಿಸಿಬಿ ಪೊಲೀಸರು ಸ್ವಾಮೀಜಿಯನ್ನು ಬೆಂಗಳೂರಿಗೆ ಕರೆತಂದ ನಂತರದಲ್ಲಿ ಟಿಕೆಟ್‌ ಹಂಚಿಕೆಗೆ ಸಂಬಂಧಿಸಿದಂತೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಚೈತ್ರಾ ಕುಂದಾಪುರ, ಗಗನ್‌ ಕಡೂರು ಅವರನ್ನು ಮುಖಾಮುಖಿ ಮಾಡಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಚೈತ್ರಾ ಕುಂದಾಪುರ ಅರೆಸ್ಟ್‌ ಆದ ಬೆನ್ನಲ್ಲೇ ಆಕೆ ತನ್ನ ಆಪ್ತ ಶ್ರೀಕಾಂತ್‌ ಎಂಬಾತನ ಹೆಸರಲ್ಲಿ ಇಟ್ಟಿದ್ದ 1.8 ಕೋಟಿ ರೂಪಾಯಿ ಆಸ್ತಿಪತ್ತೆಯಾಗಿದ್ದು, 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸೊಸೈಟಿಯ ಲಾಕರ್‌ನಲ್ಲಿ ಇರಿಸಲಾಗಿದ್ದ 40 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಚುನಾವಣೆಯಲ್ಲಿ ಟಿಕೆಟ್‌ ಕೊಡಿಸುವುದಾಗಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಅರೆಸ್ಟ್‌ ಆಗಿದ್ದಾರೆ. ಆದ್ರೆ ಉಡುಪಿ ಜಿಲ್ಲೆಯ ಕೋಟ ಪೊಲೀಸ್‌ ಠಾಣೆಯಲ್ಲಿ ಮೀನುಗಾರನಿಗೆ ವಂಚಿಸಿದ ಕುರಿತು ಪ್ರಕರಣ ದಾಖಲಾಗಿದೆ. ಇನ್ನೊಂದೆಡೆಯಲ್ಲಿ ಹಾಲಶ್ರೀ ಸ್ವಾಮೀಜಿ ಬಂಧನ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಪಡಿತರ ಚೀಟಿ ತಿದ್ದುಪಡಿಗೆ ಇಂದೇ ಕೊನೆಯ ದಿನ : ಮಿಸ್‌ ಮಾಡಿದ್ರೆ ಸಿಗಲ್ಲ ಗೃಹಲಕ್ಷ್ಮೀ ಹಣ

ಹಾಲಾಶ್ರೀ ಸ್ವಾಮೀಜಿ ಅರೆಸ್ಟ್‌ ಆದ್ರೆ ಸತ್ಯಾಸತ್ಯತೆ ಹೊರಗೆ ಬರುತ್ತದೆ. ಅಲ್ಲದೇ ದೊಡ್ಡವರ ಹೆಸರು ಹೊರಗೆ ಬರುತ್ತೆ ಅಂತಾ ಚೈತ್ರಾ ಕುಂದಾಪುರ ಸಿಸಿಬಿ ಕಚೇರಿಯಲ್ಲಿ ಕೇಳಿಕೆ ನೀಡಿದ್ದರು. ಹೀಗಾಗಿ ಪ್ರಕರಣದ ಸತ್ಯಾಸತ್ಯತೆ ಹೊರಗೆ ಬರುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ.

Chaitra Kundapura Case Abhinava Halashree Swamiji Arrest CCB Police In Odisha

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular