ಬೆಂಗಳೂರು : ಲಂಚ ಪ್ರಕರಣದ ಆರೋಪ ಎದುರಿಸುತ್ತಿರುವ ಚೆನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ (Madal Virupakshappa) ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ. ಹೈಕೋರ್ಟ್ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಟೋಲ್ ಬಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ 6 ಕೋಟಿ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಪ್ರಕರಣದ ಎ1 ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಜಾಮೀನು ಪಡೆದಿದ್ದರು. ಆದರೆ ಲೋಕಾಯುಕ್ತ ಅಧಿಕಾರಿಗಳ ಮನವಿಯ ಮೇರೆಗೆ ಹೈಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಮಾಡಾಳ್ ವಿರೂಪಾಕ್ಷಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದ್ದರು ಎನ್ನಲಾಗಿತ್ತು. ಆದ್ರೀಗ ತುಮಕೂರಿನಲ್ಲಿ ಮಾಡಾಳ್ ಅವರ ಬಂಧನವಾಗಿದೆ.
ಇನ್ನೋವಾ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕ್ಯಾತ್ಸಂದ್ರ ಟೋಲ್ ಬಳಿಯಲ್ಲಿ ಕಾದು ಕುಳಿತಿದ್ದ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸದ್ಯ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಕಚೇರಿಗೆ ಕರೆತರುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತುರ್ತು ಸಭೆ ಕರೆದಿದ್ದು, ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್, ಎಸ್.ಪಿ. ಅಶೋಕ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
#MadalVirupakshappa ಲೋಕಾಯುಕ್ತ ಪೊಲೀಸರಿಂದ ಚೆನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ#BJP #BreakingNews #madalvirupaksha #Karnataka #madaldavanagere #chennagirimla #bjpmla pic.twitter.com/wyVPW2k892
— News Next (@newsnext_live) March 27, 2023
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯೂಎಸ್‌ಎಸ್‌ಬಿಯಲ್ಲಿ ಚೀಪ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ತಂದೆಯ ನಿಗಮದಲ್ಲಿ ಟೆಂಡರ್ ಪಡೆಯಲು ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪಡೆಯುತ್ತಿರುವ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ನಡೆಸಿ ಬಂಧಿಸಿದ್ದರು. ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ರೂಪಾಯಿ ನಗದು ಹಣದೊಂದಿಗೆ ಮಾಡಾಳ್ ಪ್ರಶಾಂತ್‌ನನ್ನು ಬಂಧಿಸಿದ್ದರು. ಪ್ರಕರಣದ ಬೆನ್ನಲ್ಲೇ ಮಾಡಾಳ್ ನಿಗಮ ಮಂಡಳಿ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಿದ್ದರು. ನಂತರದಲ್ಲಿ ಹೈಕೋರ್ಟ್‌ನಲ್ಲಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಾಲಯ ಜಾಮೀನು ನೀಡುತ್ತಿದ್ದಂತೆಯೇ ಚೆನ್ನಗಿರಿಯಲ್ಲಿ ಪ್ರತ್ಯಕ್ಷರಾಗಿದ್ದರು.
ಇದನ್ನೂ ಓದಿ : ಭುಗಿಲೆದ್ದ ಎಸ್ ಸಿ, ಎಸ್ ಟಿ ಮೀಸಲಾತಿ ಹೋರಾಟ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ
ಇದನ್ನೂ ಓದಿ : 5th and 8th Class Public Examination: ‘ಸಾರ್ವಜನಿಕ ಪರೀಕ್ಷೆ’ ನಡೆಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ