Children sick After having lunch: ಮಧ್ಯಾಹ್ನದ ಊಟ ಸೇವಿಸಿ ಮಕ್ಕಳು ಅಸ್ವಸ್ಥ: 60 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಶಿವಮೊಗ್ಗ: (Children sick After having lunch) ಮೊರಾರ್ಜಿ ದೇಸಾಯಿ ವಸತಿ ಶಾಲೆಯಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶಿವಮೊಗ್ಗದ ಗೊಂದಿ ಚಟ್ನಹಳ್ಳಿಯಲ್ಲಿ ನಡೆದಿದೆ. ಅರವತ್ತಕ್ಕೂ ಹೆಚ್ಚು ಮಕ್ಕಳನ್ನು ನಗರದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು ಮುನ್ನೂರಕ್ಕೂ ಹೆಚ್ಚು ಮಕ್ಕಳಿದ್ದು, ಸೋಮವಾರ ಮಧ್ಯಾಹ್ನ ಎಂದಿನಂತೆ ಎಲ್ಲರಿಗೂ ಬಿಸಿಯೂಟ ನೀಡಲಾಗಿತ್ತು. ಊಟದ ನಂತರ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದುlorry caught fire: ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ: ಚಾಲಕ, ಕ್ಲೀನರ್ ಅಪಾಯದಿಂದ ಪಾರು, ಕೆಲವರು ವಾಂತಿ ಮಾಡಿಕೊಂಡಿದ್ದರು. ತಕ್ಷಣವೇ ಅಸ್ವಸ್ಥರಾಗಿದ್ದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮಕ್ಕಳು ಅಸ್ವಸ್ಥರಾಗಲು ಕಾರಣಗಳು ಏನೆಂಬುದು ತಿಳಿದುಬಂದಿಲ್ಲ.

“ಮೊರಾರ್ಜಿ ದೇಸಾಯಿ ಶಾಲೆಯ ಮಕ್ಕಳು ಮಧ್ಯಾಹ್ನ ಚಪಾತಿ, ಪಲ್ಯ, ಅನ್ನ ಸಾಂಬಾರು ಸೇವಿಸಿದ್ದು, ನಂತರದಲ್ಲಿ ಒಬ್ಬೊಬ್ಬರೇ ಅಸ್ವಸ್ಥರಾಗಿದ್ದಾರೆ. ಕೆಲವರಿಗೆ ಹೊಟ್ಟೆ ನೋವು ಕಾಣಿಸಿಕೊಂಡರೆ ಇನ್ನೂ ಕೆಲವರಿಗೆ ವಾಂತಿಯಾಗಿದೆ. ಕೆಲವರು ತಲೆತಿರುಗಿ ಬಿದ್ದಿದ್ದಾರೆ. ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಸಿಮ್ಸ್‌ ನಿರ್ದೇಶಕ ವಿರೂಪಾಕ್ಷ ಅವರು ವರದಿ ಮಾಧ್ಯಮಗಳಿಗೆ ತಿಳಿಸಿದರು.

ಮೇಲ್ನೋಟಕ್ಕೆ ನೀರಿನಿಂದ ತೊಂದರೆ ಅಗಿರಬಹುದು ಎಂದು ಹೇಳಲಾಗುತ್ತಿದೆ. ಮಧ್ಯಾಹ್ನ ಮಕ್ಕಳು ಸೇವಿಸಿದ ಆಹಾರ, ನೀರು ಮತ್ತು ವಾಂತಿಯ ಸ್ಯಾಂಪಲ್‌ ಪಡೆದಿದ್ದು, ಪರೀಕ್ಷೆಗೆ ಕಳುಹಿಸಲಾಗುತ್ತದೆ ಎಂದು ಗ್ರಾಮಾಂತರ ಶಾಸಕ ಅಶೋಕ್‌ ನಾಯ್ಕ ಅವರು ತಿಳಿಸಿದ್ದಾರೆ. ಅಸ್ವಸ್ಥಾಗಿದ್ದ ಕೆಲವು ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ. ಇನ್ನೂ ಕೆಲವರಿಗೆ ಆಸ್ಪತ್ರೆಯಲ್ಲೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ : lorry caught fire: ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ: ಚಾಲಕ, ಕ್ಲೀನರ್ ಅಪಾಯದಿಂದ ಪಾರು

ಇದನ್ನೂ ಓದಿ : Kundapura 4 Arrest : ಕುಂದಾಪುರದಲ್ಲಿ ಇಸ್ಪೀಟ್ ಆಡುತ್ತಿದ್ದ 4 ಮಂದಿಯ ಬಂಧನ

ಇದನ್ನೂ ಓದಿ : Freedom fighter G.Govindaraj: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಜಿ.ಗೋವಿಂದರಾಜ್‌ ವಿಧಿವಶ

Children sick After having lunch: Children sick after having lunch: More than 60 children admitted to hospital

Comments are closed.