7th Pay Commission : 7 ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ: ಮೂವರು ಸದಸ್ಯರ ನೇಮಕ

ಬೆಂಗಳೂರು : ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ (7th Pay Commission Appointment) ಸರಕಾರಿ ಉದ್ಯೋಗಿಗಳಿಗೆ ರಾಜ್ಯ ಸರಕಾರ ಇದೀಗ ಸಿಹಿಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್‌ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರನ್ನೊಳಗೊಂಡ 7ನೇ ವೇತನ ಆಯೋಗ ರಚನೆಗೆ ಅನುಮೋದನೆ ನೀಡಿದ್ದಾರೆ.

7th Pay Commission Appointment : ಆಯೋಗದ ಸದಸ್ಯರ ವಿವರ

ಮುಖ್ಯಕಾರ್ಯದರ್ಶಿ ಕೆ. ಸುಧಾಕರ ರಾವ್‌ ಅಧ್ಯಕ್ಷತೆಯಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್‌ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶೀಯಾಗಿ ನೇಮಕ ಮಾಡಲಾಗಿದೆ.

7ನೇ ವೇತನ ಆಯೋಗವು ಸರಕಾರಿ ನೌಕಕರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ(ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತುಪಡಿಸಿ)ಯ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿ, ಕಾರ್ಯಸಾಧುವಾದ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡುವುದು, ಕೇಂದ್ರದ ವೇತನ ಶ್ರೇಣಿಯನ್ನುರಾಜ್ಯದಲ್ಲಿ ಅಳವಡಿಸುವ ಕುರಿತು ಪರಿಶೀಲಿಸುವುದು, ರಾಜ್ಯ ಸರಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸಿವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಘೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿ ಶಿಫಾರಸು ನೀಡಲಿದೆ.

ಇದನ್ನೂ ಓದಿ : VOTER ID SCAM: ವೋಟರ್ ಐಡಿ ಹಗರಣ.. ಸಿದ್ದರಾಮಯ್ಯ ಕೊಟ್ರು ಕೆಜಿಎಫ್.. ಕಾಂತಾರ ಲಿಂಕ್

ಇದನ್ನೂ ಓದಿ : BL SANTOSH : ಶಾಸಕರಿಗೆ ಹಣದ ಆಮೀಷ ಕೇಸ್.. ಬಿ.ಎಲ್.ಸಂತೋಷ್ ಗೆ ನೋಟಿಸ್

ಇದನ್ನೂ ಓದಿ : 7th pay commission formation : ಸರಕಾರಿ ನೌಕರರಿಗೆ ಗುಡ್ ನೈೂಸ್ : 7ನೇ ವೇತನ ಆಯೋಗ ರಚನೆ : ಸಿಎಂ ಬೊಮ್ಮಾಯಿ

ಸರಕಾರದ ಸಂಪನ್ಮೂಲಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲ ಮತ್ತು ವಿತ್ತೀಯ ಹೊಣೆಗಾರಕೆ ಅಧಿನಿಯಮ, ೨೦೦೨ರ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ವೇತನ ಆಯೋಗವು ಆರು ತಿಂಗಳ ಒಳಗಾಗಿ ತನ್ನ ಶಿಫಾರಸುಗಳನ್ನು ಮಾಡಲಿದೆ.

CM approves formation of 7th Pay Commission : Appointment of three members

Comments are closed.