CM VISIT UK : ನೆರೆಪೀಡಿತ ಉತ್ತರ ಕನ್ನಡ ಜಿಲ್ಲೆ ಸಿಎಂ ಬೊಮ್ಮಾಯಿ ಭೇಟಿ : ಸ್ಥಳದಲ್ಲಿಯೇ ಘೋಷಿಸುತ್ತಾರಾ ಪರಿಹಾರ

ಕಾರವಾರ : ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಅಂಕೋಲ ಸೇರಿದಂತೆ ಹಲವು ತಾಲೂಕುಗಳಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಇಂದು ಭೇಟಿ ನೀಡಲಿದ್ದಾರೆ. ಈ ವೇಳೆಯಲ್ಲಿ ಸಿಎಂ ಸ್ಥಳದಲ್ಲಿಯೇ ಪರಿಹಾರ ಘೋಷಿಸೋ ಸಾಧ್ಯತೆಯಿದೆ.

ಬೆಳಗ್ಗೆ 9.30 ನಿಮಿಷಕ್ಕೆ ಎಚ್‌ಎಲ್‌ಎ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಲಿರುವ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ನೆರೆ ಹಾವಳಿಯಿಂದ ತತ್ತರಿಸಿರುವ ಯಲ್ಲಾಪುರದ ಪ್ರಮುಖ ಪ್ರದೇಶಗಳನ್ನು ವೀಕ್ಷಣೆ ಮಾಡಿದ ನಂತರ ಅಂಕೋಲಕ್ಕೆ ಭೇಟಿ ನೀಡುವರು.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಗ್ರಾಮಗಳು ನೆರೆ ಹಾವಳಿಯಿಂದ ತತ್ತರಿಸಿದೆ. ಸಾವಿರಾರು ಮಂದಿ ಬದುಕುನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಅರೆಬೈಲ್‌ ಪ್ರದೇಶದಲ್ಲಿ ಗುಡ್ಡಕುಸಿತದಿಂದ ಉಂಟಾಗಿರುವ ಪ್ರದೇಶಕ್ಕೂ ಭೇಟಿ ನೀಡಿ, ಜನರ ಸಮಸ್ಯೆಯನ್ನು ಆಲಿಸಲಿದ್ದಾರೆ. ನೆರೆ ಹಾವಳಿಯಿಂದ ತತ್ತರಿಸಿದ ಜನರಿಗೆ ಸಿಎಂ ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡುವ ಸಾಧ್ಯತೆಯಿದೆ.

ಮಧ್ಯಾಹ್ನ 2 ರಿಂದ 3 ಗಂಟೆಯ ವರೆಗೆ ಅಂಕೋಲ ಸ್ವಾತಂತ್ರ್ಯ ಭವನದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆಗೆ ಸಭೆಯನ್ನು ನಡೆಸಲಿದ್ದಾರೆ. ನಂತರ ಉತ್ತರ ಕನ್ನಡ ಜಿಲ್ಲೆಯಿಂದ ನೇರವಾಗಿ ಹುಬ್ಬಳ್ಳಿಗೆ ವಾಪಾಸಾಗಲಿದ್ದಾರೆ.

Comments are closed.