ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಭೇಟಿ : ಪರಿಹಾರ ನೀಡಲು ಸರಕಾರದ ಬಳಿ ಹಣವಿದೆ : ಬೊಮ್ಮಾಯಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರವಾಹ ಪರಿಸ್ಥಿತಿಯಿಂದಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ. ಪ್ರವಾಹ ಪರಿಹಾರ ನೀಡಲು ಸರಕಾರದ ಬಳಿಯಲ್ಲಿ ಹಣವಿದೆ. ಅಲ್ಲದೇ ಜಿಲ್ಲಾಧಿಕಾರಿಗಳ ಖಾತೆಯಲ್ಲಿಯೂ ಹಣವಿದೆ. ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆಯನ್ನು ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಸವರಾಜ್‌ ಬೊಮ್ಮಾಯಿ ಅವರು ಯಲ್ಲಾಪುರ, ಕುಮಟಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿಯನ್ನು ನೀಡಿದ್ದಾರೆ. ಭೂ ಕುಸಿತ ಉಂಟಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅರೆಬೈಲ್‌ ಘಾಟ್‌ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಗುಡ್ಡ ಕುಸಿತವಾಗಿರುವ ಪ್ರದೇಶವನ್ನು ಪರಿಶೀಲನೆಯನ್ನು ನಡೆಸಿದ್ದಾರೆ.

ಸಿಎಂ ಬಸವರಾಜ್‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸ್ಥಳೀಯರು, ಸಿಎಂ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅದ್ರಲ್ಲೂ ವಿದ್ಯುತ್‌ ಸಂಪರ್ಕ ಕಡಿತದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವರ್ಚುವಲ್‌ ತರಗತಿಗಳನ್ನು ಕೇಳಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಈ ವೇಳೆಯಲ್ಲಿ ಮೂಲಸೌಕರ್ಯ ಒದಗಿಸುವ ಕುರಿತು ಸಿಎಂ ಭರವಸೆಯನ್ನು ನೀಡಿದ್ದಾರೆ.

ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರದ ಯಲ್ಲಾಪುರದಲ್ಲಿನ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಆಸ್ಪತ್ರೆಯಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆಯನ್ನು ನೀಡಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಸುಮಾರು ಐವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಯಾಲಿಸಿಸ್‌ ಘಟಕವನ್ನು ಸಿಎಂ ಇದೇ ಸಂದರ್ಭದಲ್ಲಿ ಉದ್ಘಾಟಿಸಿದ್ದಾರೆ.ಈ ವೇಳೆಯಲ್ಲಿ ಮಾಜಿ ಸಚಿವ ಶಿವರಾಮ್‌ ಹೆಬ್ಬಾರ್‌ ಸಾಥ್‌ ನೀಡಿದ್ದರು.

Comments are closed.