CM Basavaraja Bommai : ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು : CM Basavaraja Bommai : ಹಿಂದೂ ಕಾರ್ಯಕರ್ತ, ಭಜರಂಗ ದಳ ನಾಯಕ ಪ್ರವೀಣ್​ ನೆಟ್ಟಾರು ಹತ್ಯೆಯಿಂದಾಗಿ ಸಂಪೂರ್ಣ ಕರ್ನಾಟಕದಲ್ಲಿ ಸೂತಕದ ಛಾಯೆ ಆವರಿಸಿದೆ. ಇಂದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ತನ್ನ ಒಂದು ವರ್ಷದ ಸಂಭ್ರಮವನ್ನು ಆಚರಿಸಬೇಕಿತ್ತು. ಆದರೆ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಜನೋತ್ಸವ ಕಾರ್ಯಕ್ರಮವನ್ನೇ ಸಿಎಂ ಬೊಮ್ಮಾಯಿ ರದ್ದುಗೊಳಿಸಿದ್ದಾರೆ.


ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳಲಿದ್ದಾರೆ. ಇಲ್ಲಿಂದ ನೇರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಹತ್ಯೆಯಾದ ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಪ್ರವೀಣ್​ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸಿಎಂ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಮಂಗಳವಾರ ರಾತ್ರಿ ದುಷ್ಕರ್ಮಿಗಳ ಭೀಕರ ಅಟ್ಟಹಾಸಕ್ಕೆ ಪ್ರವೀಣ್​ ನೆಟ್ಟಾರು ಬಲಿಯಾಗಿದ್ದಾರೆ. ಕೇರಳದ ನಂಬರ್​ ಪ್ಲೇಟ್​ ಹೊಂದಿರುವ ಬೈಕ್​ನಲ್ಲಿ ಬಂದಿದ್ದ ಮೂವರು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಚಿಕನ್​ ಅಂಗಡಿ ಬಂದ್​ ಮಾಡಿ ಮನೆಗೆ ತೆರಳಬೇಕಿದ್ದ ಪ್ರವೀಣ್​ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ತೀವ್ರಗೊಳಿಸಿದ್ದಾರೆ.


ಇಂದು ಬಿಜೆಪಿ ಸರ್ಕಾರವು ಜನೋತ್ಸವ ಕಾರ್ಯಕ್ರಮವನ್ನು ನಡೆಸಬೇಕಿತ್ತು. ಅಲ್ಲದೇ ವಿಧಾನಸೌಧದಲ್ಲಿ ಸಾಧನಾ ಸಮಾವೇಶ ಕೂಡ ನಡೆಯುವುದಿತ್ತು. ಆದರೆ ಜಿಲ್ಲಾ ಬಿಜೆಪಿ ಯುವ ಮೋರ್ಛಾದ ಸದಸ್ಯ ಪ್ರವೀಣ್​ ನೆಟ್ಟಾರೆ ಸಾವಿನ ಬಳಿಕ ಸಿಎಂ ಬೊಮ್ಮಾಯಿ ಈ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಶೋಕಾಚರಣೆ ನಡೆಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಸುಮ್ಮನೇ ಬಿಡುವುದಿಲ್ಲ. ಹರ್ಷ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದಂತೆ ಆದಷ್ಟು ಬೇಗ ಪ್ರವೀಣ್​ ಕೊಲೆಗೆ ಕಾರಣರಾದ ಪ್ರತಿಯೊಬ್ಬರನ್ನೂ ಬಂಧಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : CM Bommai : ಅಗತ್ಯ ಎನಿಸಿದಲ್ಲಿ ಉತ್ತರ ಪ್ರದೇಶ ಮಾಡೆಲ್​ ಕರ್ನಾಟಕದಲ್ಲಿ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ : Bommai press conference : ಆತ್ಮಸಾಕ್ಷಿಗೆ ಅನುಗುಣವಾಗಿ ಜನೋತ್ಸವ ರದ್ದು; ಪ್ರವೀಣ್​ ಹಂತಕರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ – ಸಿಎಂ ಬೊಮ್ಮಾಯಿ ಅಭಯ

CM Basavaraja Bommai will visit Praveen Nettaru’s residence today

Comments are closed.