CM Changes Gossip : ಸಿಎಂ ಬದಲಾವಣೆ ಗಾಸಿಪ್ ಗೆ ತೆರೆ : ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಎಲೆಕ್ಷನ್ ಅಂದ್ರು ಅರುಣ ಸಿಂಗ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾದಷ್ಟೇ ಚರ್ಚೆಯಾಗ್ತಿರೋ ಇನ್ನೊಂದು ವಿಚಾರ ಸಿಎಂ ಬದಲಾವಣೆ. ಹುಬ್ಬಳ್ಳಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬದಲಾವಣೆಗೆ ಅಂತಿಮ ಸ್ಪರ್ಶ‌ನೀಡಿ ಪರ್ಯಾಯ ನಾಯಕರ ಆಯ್ಕೆಯೂ ನಡೆಯಲಿದೆ ಎಂಬಷ್ಟರ ಮಟ್ಟಿಗೆ ಮಹತ್ವ ಪಡೆದುಕೊಂಡಿದ್ದ ಸಿಎಂ ಬದಲಾವಣೆ ಪಟಾಕಿ ಠುಸ್ ಎಂದಿದೆ. ಕಾರ್ಯಕಾರಿಣಿಗೂ ಮುನ್ನವೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಾಯಕತ್ವ (CM Changes Gossip) ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನಾಳೆಯಿಂದ ಎರಡು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯಲಿದೆ. ಈ ಪಕ್ಷದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕತ್ವ ಬದಲಾಣೆಯ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಸಿಎಂ ಯಾರಾಗಬೇಕೆಂಬುದು ತೀರ್ಮಾನವಾಗಲಿದೆ ಎಂಬ ಮಾತುಗಳು ಬಿಜೆಪಿಯ ಪಡಶಾಲೆಯಲ್ಲೇ ಕೇಳಿಬಂದಿದ್ದವು.

ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅನಾರೋಗ್ಯದ ವಿಚಾರ ಈ ಊಹಾಪೋಹಗಳಿಗೆ ಮತ್ತಷ್ಟು ಬಲ ತುಂಬಿತ್ತು. ಆದರೆ ಕಾರ್ಯಕಾರಿಣಿ ಅರಂಭಕ್ಕೂ ಮುನ್ನವೇ ಈ ಊಹಾಪೋಹ ಗಳಿಗೆ ತೆರೆ ಬಿದ್ದಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಬೊಮ್ಮಾಯಿಯವರನ್ನು ಮುಕ್ತ ಕಂಠದಿಂದ ಶ್ಲಾಘಿಸುವ ಮೂಲಕ ಸಿಎಂ ಬದಲಾವಣೆಯ ಪ್ರಹಸನಕ್ಕೆ ಅಂತ್ಯ ಹಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ಊಹಾಪೋಹ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ‌ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ಕಾರ್ಯವೈಖರಿಗೆ ಫುಲ್ ಮಾರ್ಕ್ಸ್‌ನೀಡಿ ಬಹುಪರಾಕ್ ಎಂದ ಅರುಣ ಸಿಂಗ್, ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಆಗಿ‌ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಪುನರುಚ್ಛಿಸಿದ್ದಾರೆ.

ಮಾತ್ರವಲ್ಲ ಯಡಿಯೂರಪ್ಪನವರು ಬದಲಾಗಲ್ಲ ಎಂದು ಬದಲಾಯಿಸಿದ ವಿಚಾರಕ್ಕೆ ಮಾತನಾಡಿದ ಅರುಣ ಸಿಂಗ್, ನಾವಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿಲ್ಲ. ಯಡಿಯೂರಪ್ಪನವರೇ ಯುವಕರಿಗೆ ಸ್ಥಾನ ಹಾಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿ ಬಿಟ್ಟು ಕೊಟ್ಟಿದ್ದಾರೆ ಎಂದರು.

ಅಲ್ಲದೇ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಅರುಣ್ ಸಿಂಗ್ ಕಾಂಗ್ರೆಸ್ ನಲ್ಲಿ ಈಗಾಗಲೇ ಅಧಿಕಾರಕ್ಕಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ನಡುವೆ ಜೋರು ಫೈಟ್ ನಡೆದ ಇದರ. ಕಾಂಗ್ರೆಸ್ ದೇಶದಲ್ಲೇ ನೆಲೆ‌ಕಳೆದುಕೊಂಡಿದೆ ಎಂದಿದ್ದಾರೆ. ರಾಜ್ಯ ಬಿಜೆಪಿ ಕರ್ನಾಟಕದಲ್ಲಿ ಸಮರ್ಥವಾಗಿ ಆಡಳಿತ ನಡೆಸಿದ್ದು, ಕಾರ್ಯಕಾರಿಣಿಗೆ ಜೆ.ಲಿ.ನಡ್ಡಾ ಕೊರೋನಾ ನಿಯಮಗಳ ಕಾರಣಕ್ಕೆ ಹಾಜರಾಗುತ್ತಿಲ್ಲ ಎಂದು ಅರುಣ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : Ghar Wapsi: ಘರ್​ ವಾಪಸಿ ಮಾಡಿದ ಒಂದೇ ಕುಟುಂಬದ 9 ಮಂದಿ: ಹಿಂದೂ ಧರ್ಮಕ್ಕೆ ಮರುಮತಾಂತರ

ಇದನ್ನೂ ಓದಿ : Tejasvi Surya : ತೀವ್ರ ವಿರೋಧ ಹಿನ್ನೆಲೆ ಘರ್​ ವಾಪಸಿ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

(CM changes gossip, Bommai leads next election by Arun Singh)

Comments are closed.