ಸಿಎಂ ಸಿದ್ದರಾಮಯ್ಯ ಪ್ರಮಾಣವಚನ : ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಉಪಸ್ಥಿತಿ, ಸೋನಿಯಾ ಗಾಂಧಿ ಗೈರು

ನವದೆಹಲಿ : ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೋನಿಯಾ ಗಾಂಧಿ ಗೈರು ಆಗಿದ್ದಾರೆ. ಆದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ. ವರದಿಗಳ ಪ್ರಕಾರ, ಅವರ ಅನಾರೋಗ್ಯದ ಕಾರಣ ಎಐಸಿಸಿ ಅಧ್ಯಕ್ಷರು ಸಮಾರಂಭದಿಂದ ಹೊರಗುಳಿಯುವ ನಿರೀಕ್ಷೆಯಿದೆ ಎನ್ನಲಾಗಿದೆ. ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನ ಹುಂಡಿಯ ಸಿದ್ದರಾಮಯ್ಯ (CM Siddaramaiah swearing) ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಸಾಮಾನ್ಯ ಹುಡುಗನಾಗಿದ್ದ ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ ಆಗುವವರೆಗೆ ನಡೆದು ಬಂದ ಹಾದಿ ಬಲು ರೋಚಕ. 1948 ರ ಅಗಸ್ಟ್‌ 12 ರಂದು ಮೈಸೂರು ಜಿಲ್ಲೆಯ ವರುಣಾ ಹೋಬಳಿಯ ಸಿದ್ದರಾಮನಹುಂಡಿ ಅನ್ನೋ ಗ್ರಾಮದಲ್ಲಿ ಜನಿಸಿದ ಸಿದ್ದರಾಮಯ್ಯ. ಬಾಲ್ಯದಲ್ಲಿಯೇ ರಾಜಕೀಯ ಕ್ಷೇತ್ರದತ್ತ ಒಲವು ಹೊಂದಿದ್ದರು, ತಮ್ಮ ನಾಯಕತ್ವದ ಗುಣಗಳಿಂದಲೇ ಎಲ್ಲರ ಗಮನ ಸೆಳೆದಿದ್ದರು.

ಆದರೆ, ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮಧ್ಯಾಹ್ನ 12 ಗಂಟೆಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಅಲ್ಲಿ ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹಲವು ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಆಹ್ವಾನಿಸಿದ್ದು, ಮಧ್ಯಾಹ್ನ 12.30ಕ್ಕೆ ಶ್ರೀಕಂಠೀರವ ಸ್ಟೇಡಿಯಂನಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಮತ್ತು ಅವರ ಸಚಿವ ಸಂಪುಟಕ್ಕೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ ? ಸಿದ್ದರಾಮನಹುಂಡಿ To ವಿಧಾನಸೌಧ

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ 8 ಸಚಿವರ ಪ್ರಮಾಣ ವಚನ

2013ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸ್ಥಳದಲ್ಲೇ ಇಂದು ಮುಖ್ಯಮಂತ್ರಿ ಪಟ್ಟ ಸ್ವೀಕರಿಸಲಿದ್ದಾರೆ. ಶುಕ್ರವಾರ ತಡರಾತ್ರಿಯವರೆಗೂ ದೆಹಲಿಯಲ್ಲಿದ್ದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ಸಚಿವರ ಹೆಸರು, ಖಾತೆ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದು, ಇದೀಗ ನಗರಕ್ಕೆ ಮರಳಿದ್ದಾರೆ.

ಇದನ್ನೂ ಓದಿ : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣವಚನ : ಯಾರಿಗೆಲ್ಲಾ ಸಿಗುತ್ತೆ ಸಚಿವ ಸ್ಥಾನ

CM Siddaramaiah: CM Siddaramaiah swearing in: Rahul Gandhi, Priyanka Gandhi present, Sonia Gandhi absent

Comments are closed.