ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್‌ ಸರಕಾರ ರಚನೆಯಾದ ಮೇಲೆ ಇಂದು ಸಿಎಂ ಸಿದ್ದರಾಮಯ್ಯ ಅವರ ಮೊದಲ ವಿಧಾನಸಭಾ ಅಧಿವೇಶನ ನಡೆಯಲಿದೆ. ಇದರ ಸಲುವಾಗಿ ಮುಖ್ಯಮಂತ್ರಿಗಳಿಗೆ ನೀಡುವಂತಹ ಝೀರೋ ಟ್ರಾಫಿಕ್‌ (Zero traffic) ಸೌಲಭ್ಯ ತನಗೆ ಬೇಡ ಎಂದು ಟ್ವೀಟ್‌ ಮಾಡಿ ಸಿಎಂ ಸಿದ್ದರಾಮಯ್ಯ (CM Siddaramaiah ) ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್‌ನಲ್ಲಿ “ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.

ಇದನ್ನೂ ಓದಿ : ರಾಜೀವ್‌ ಗಾಂಧಿ ಪುಣ್ಯಸ್ಮರಣೆ : ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಗೌರವ ನಮನ

ಇದನ್ನೂ ಓದಿ : ನಾಳೆಯಿಂದ 3 ದಿನ ವಿಧಾನ ಮಂಡಲ ವಿಶೇಷ ಅಧಿವೇಶನ

ಇದನ್ನೂ ಓದಿ : 200 ಯುನಿಟ್ ಉಚಿತ ವಿದ್ಯುತ್ ಸೇರಿ ಯಾವ ಭರವಸೆಯೂ ಈಡೇರುವುದಿಲ್ಲ : ಶಾಸಕ ಕಾರ್ಕಳ ಸುನಿಲ್‌ ಕುಮಾರ್‌

ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್‌ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ತಿಳಿಸಿದ್ದೇನೆ.ಝೀರೋ ಟ್ರಾಫಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುವುದನ್ನು ಮನಗಂಡ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾಳೆಯಿಂದ 3 ದಿನ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು : ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DCM DK Sivakumar) ನಿನ್ನೆ ಬೆಂಗಳೂರಿನ ಕಂಠೀರವ ಕ್ರೀಡಾಗಂಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ರಚನೆಯಾದ ಬೆನ್ನಲ್ಲೇ ಅಂದರೆ ನಾಳೆ ಸೋಮವಾರದಿಂದಲೇ (ಮೇ 22) ಮೊದಲ ವಿಧಾನಸಭೆ ಅಧಿವೇಶನ (Vidhan Mandal Special Session) ನಡೆಯಲಿದೆ. ಹಾಗೆಯೇ ಸೋಮವಾರದಿಂದ ಪ್ರಾರಂಭವಾಗಿ ಬುಧವಾರದವರೆಗೂ ಮೂರು ದಿನಗಳ ಕಾಲ ಅಧಿವೇಶನ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ಸರಕಾರ ಅಧಿಕಾರ ಬಂದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮತನಾಡಿದ ಸಿಎಂ ಸಿದ್ದರಾಮಯ್ಯ, ಹಂಗಾವಿ ಸ್ಪೀಕರ್‌ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದು ಹೇಳಿದ್ದಾರೆ. ಹೀಗಾಗಿ ನಾಳೆ (ಮೇ 22) ನಡೆಯುವ ಅಧಿವೇಶನದ ಹಂಗಾಮಿ ಸಭಾಧ್ಯಕ್ಷರಾಗಿ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್‌.ವಿ. ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸದ್ಯ ಈ ಮೊದಲು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ. ಮಾಧ್ಯಮದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾವು ನೀಡಿದ ಐದು ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಹಾಗೆಯೇ ಇದರಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ಈ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

CM Siddaramaiah said that I do not want zero traffic facility

Comments are closed.