ಸಿಎಂ ಯಡಿಯೂರಪ್ಪಗೆ ಕೋವಿಡ್ ನೆಗೆಟಿವ್ : ಇಂದು ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿಂದು ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ ವೇಳೆ ಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆ ಯಲ್ಲಿ ಕಳೆದೈದು ದಿನಗಳಿಂದಲೂ ಸಿಎಂ ಯಡಿಯೂರಪ್ಪ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರಿಗೆ ನಿನ್ನೆ ಕೋವಿಡ್ ಟೆಸ್ಟ್ ಮಾಡಿಸಿದ ವೇಳೆಯಲ್ಲಿ ಕೋವಿಡ್ ನೆಗೆಟಿವ್ ವರದಿ ಬಂದಿದೆ. ನಿನ್ನೆ ಎರಡು ಬಾರಿ ನಡೆಸಿದ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿಯೂ ಯಡಿಯೂರಪ್ಪಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಎರಡನೇ ಅಲೆಯಲ್ಲಿಯೂ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಆಸ್ಪ್ರತ್ರೆಯಿಂದಲೇ ಯಡಿಯೂರಪ್ಪ ಸಚಿವರ, ಶಾಸಕರ ಸಭೆ ಹಾಗೂ ಸರ್ಪಪಕ್ಷ ಸಭೆಯನ್ನು ನಡೆಸಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಮನೆಯಲ್ಲಿಯೇ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. 

Comments are closed.