ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ವರುಣನ ಅಬ್ಬರ : ಕಾಫಿಬೆಳೆಗಾರರಿಗೆ ಹೆಚ್ಚಿದ ಚಿಂತೆ
ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದಾಗಿ ಇಂದು ಕೂಡ ರಾಜ್ಯದ ವಿವಿಧೆಡೆಯಲ್ಲಿ ಮಳೆಯಾಗಲಿದೆ. ಅದರಲ್ಲೂ ವಿಶೇಷವಾಗಿ ಚಿಕ್ಕಮಗಳೂರಿನಲ್ಲಿ ಇಂದು ವರುಣನ ಆರ್ಭಟ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು ಕಾಫಿ ಬೆಳೆಗಾರರು ತಲೆಕೆಡಿಸಿಕೊಂಡಿದ್ದಾರೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಶುಷ್ಕ ಹವಾಮಾನ ಉಂಟಾಗುವ ಸಾಧ್ಯತೆಯಿದೆ. ಬೀದರ್ನಲ್ಲಿ ಮತ್ತೆ ಅತೀ ಕಡಿಮೆ ತಾಪಮಾನ ದಾಖಲಾಗಿದ್ದು 15.6 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ರಾತ್ರಿ ವೇಳೆ ಬೀದರ್ನಲ್ಲಿ ಕೊರೆಯುವ ಚಳಿ ಇರಲಿದೆ ಎನ್ನಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಮುಂದುವರಿದಿದೆ. ಕನಿಷ್ಟ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಆದರೆ ಗರಿಷ್ಠ ತಾಪಮಾನ 27°Cಆಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.



