ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಆಗಮನ : ಚಳಿಯ ಜೊತೆ ಇರಲಿದೆ ಮಳೆಯ ಸಿಂಚನ

ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯಭಾರ ಕುಸಿತಗೊಂಡಿದ್ದು ಇದರ ಪರಿಣಾಮ ದೇಶದ ಮೇಲೂ ಬೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಮೋಡ ಕವಿದ ವಾತಾವರಣ ಕೂಡ ಇರಲಿದೆ.
ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಉಷ್ಣಾಂಶ ಮತ್ತಷ್ಟು ಇಳಿಕೆ ಕಾಣಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಂಜೆ ಸುಮಾರಿಗೆ ವರುಣನ ಆಗಮನದ ನಿರೀಕ್ಷೆ ಇದೆ. ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ. ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ.ತೀವ್ರಗೊಳ್ಳುತ್ತಿರುವ ಶೀತಗಾಳಿಯಿಂದಾಗಿ ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳು ಅತ್ಯಧಿಕ ಶೀತ ಗಾಳಿಯನ್ನು ಎದುರಿಸಬೇಕಿದೆ ಎಂದು ಐಎಂಡಿ ತಿಳಿಸಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories