ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಬಣಗಳ ನಡುವೆ ಜಟಾಪಟಿ

ಬೆಂಗಳೂರು : CLP meeting: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಬೆನ್ನಲ್ಲೇ ಇಂದು ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ (Karnataka Next CM) ಆಯ್ಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆಯುತ್ತಿರುವ ಸಿಎಲ್‌ಪಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌, ಕಾಂಗ್ರೆಸ್‌ ವೀಕ್ಷಕರಾಗಿರುವ ಜಿತೇಂದ್ರ ಕುಮಾರ್‌, ಸುಶೀಲ್‌ ಕುಮಾರ್‌ ಸಿಂಧೆ, ದೀಪಕ್‌ ಬಬಾರಿಯಾ ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯಗಳನ್ನು ವೀಕ್ಷಕರು ಸಂಗ್ರಹಿಸಲಿದ್ದಾರೆ. ಶಾಸಕರ ಅಭಿಪ್ರಾಯವನ್ನು ಕಾಂಗ್ರೆಸ್‌ ಹೈಕಮಾಂಡ್‌ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಮುಂದೆ ಮಂಡಿಸಲಿದ್ದಾರೆ. ನಂತರದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಸಿಎಂ ಆಗಬೇಕು ಅನ್ನುವ ನಿರ್ಧಾರವನ್ನು ಪ್ರಕಟಿಸಲಿದೆ.

CLP meeting : ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಪರ ಘೋಷಣೆ :

ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್‌ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ಶಿವಕುಮಾರ್‌ ಬಣಗಳ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರಿ ಜಟಾಪಟಿಯೇ ನಡೆಯುತ್ತಿದೆ. ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿರುವ ಶಾಂಗ್ರೀಲಾ ಹೋಟೆಲ್‌ ಹೊರ ಭಾಗದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಬೆಂಬಲಿಗರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ದಲಿತ ಸಿಎಂ ಕೂಗು ಕೂಡ ಕೇಳಿಬಂದಿದ್ದ, ದಲಿತ ಬಲ ಸಮುದಾಯದ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಆಗಿ ಆಯ್ಕೆ ಮಾಡಬೇಕು. ಪರಮೇಶ್ವರ್‌ ಅವರು ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರನ್ನು ಸರಿಯಾಗಿ ದೂಗಿಸಿಕೊಂಡು ಹೋಗುತ್ತಾರೆ ಅನ್ನೋ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ.

Karnataka Next CM : ಇಂದೇ ಮುಖ್ಯಮಂತ್ರಿ ಆಯ್ಕೆ ?

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯ ಬೆನ್ನಲ್ಲೇ ಸಿಎಂ ಆಯ್ಕೆ ನಡೆಯಲಿದೆ. ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ತೀವ್ರ ಕುತೂಹಲವನ್ನು ಮೂಡಿಸಿದೆ. ಕನಿಷ್ಠ ನೂರಕ್ಕೂ ಅಧಿಕ ಶಾಸಕರು ತಮ್ಮ ಪರ ಮತ ಚಲಾಯಿಸುವಂತೆ ಸಿದ್ದರಾಮಯ್ಯ ಈಗಾಗಲೇ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆಯಲ್ಲಿ ಡಿಕೆ ಶಿವಕುಮಾರ್‌ ಅವರು ತಮ್ಮನ್ನೇ ಸಿಎಂ ಆಗಿ ಮಾಡುವಂತೆ ಈಗಾಗಲೇ ತಮ್ಮ ಬೆಂಬಲಿಗರ ಮೂಲಕ ಬಿಗಿಪಟ್ಟು ಹಿಡಿದಿದ್ದಾರೆ.

ಗುರುವಾರ ಪ್ರಮಾಣವಚನ ?

ಇನ್ನೊಂದೆಡೆಯಲ್ಲಿ ಸಿಎಂ ಆಯ್ಕೆ ಇನ್ನೂ ನಡೆಯದೇ ಇದ್ದರೂ ಕೂಡ ಗುರುವಾರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗುತ್ತಿದೆ. ಗುರುವಾರ ಕಾಂಗ್ರೆಸ್‌ ಪಕ್ಷದ ಸಿಎಂ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಇತರ ರಾಜ್ಯಗಳಲ್ಲಿನ ಕಾಂಗ್ರೆಸ್‌ ನಾಯಕರನ್ನು ಕೂಡ ಆಹ್ವಾನಿಸುವ ಸಾಧ್ಯತೆಯಿದೆ. ಇಂದು ಸಿಎಂ ಸ್ಥಾನದ ಆಯ್ಕೆಯ ನಂತರ ಸಂಪುಟ ರಚನೆ ಆಗಲಿದೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಈಗಾಗಲೇ ಕಾಂಗ್ರೆಸ್‌ ಪಕ್ಷ 135 ಸ್ಥಾನಗಳನ್ನು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಿದೆ. ಈ ಬಾರಿ ಸಿಎಂ ಹುದ್ದೆಗೆ ಮಾತ್ರವಲ್ಲದೇ ಸಚಿವ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ : ಕರ್ನಾಟಕ ಚುನಾವಣೆ : ಬಿಜೆಪಿ ಸೋಲಿಗೆ ಈ 18 ಕಾರಣಗಳು

ಇದನ್ನೂ ಓದಿ : ಬಿಜೆಪಿ ಸೋಲು ಪ್ರಧಾನಿ ನರೇಂದ್ರ ಮೋದಿ ಸೋಲು ಎಂದ ಶಾಸಕ ಕೃಷ್ಣಭೈರೇಗೌಡ

Comments are closed.