ಭಾನುವಾರ, ಏಪ್ರಿಲ್ 27, 2025
HomeElectionಟ್ಯಾಕ್ಸ್‌ ಕಟ್ಟುವವರಿಗೆ ಇಲ್ವಂತೆ ಉಚಿತ ಕರೆಂಟ್‌ : ಕಾಂಗ್ರೆಸ್‌ ಹೇಳಿದ್ದೇನು ? ಮಾಡುವುದೇನು ?

ಟ್ಯಾಕ್ಸ್‌ ಕಟ್ಟುವವರಿಗೆ ಇಲ್ವಂತೆ ಉಚಿತ ಕರೆಂಟ್‌ : ಕಾಂಗ್ರೆಸ್‌ ಹೇಳಿದ್ದೇನು ? ಮಾಡುವುದೇನು ?

- Advertisement -

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆದಿದ್ದು, ಇನ್ನು ಮೇ 13ಕ್ಕೆ ಮತ ಏಣಿಕೆ ಮುಗಿದಿದೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವನ್ನು ಸಾಧಿಸುವ ಮೂಲಕ ಮುಂದಿನ ಐದು ವರ್ಷಗಳ ಕಾಲ ರಾಜ್ಯಭಾರ ನಡೆಸಲು ಸಿದ್ದವಾಗಿದೆ. ಒಂದು ಕಡೆ ಮುಂದಿನ ಮುಖ್ಯಮಂತ್ರಿ ಯಾರು ಆಗುತ್ತಾರೆ ಎನ್ನುವ ಕುತೂಹಲ ಜನರ ಕೆರಳಿಸಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಸರಕಾರ ನೀಡಿದ ಭರವಸೆ (Congress manifesto) ಪಕ್ಷ ಅಧಿಕಾರಕ್ಕೆ ಬರುವ ಮುನ್ನವೇ ಹುಸಿಗೊಳಿಸಿದೆ. ಹೌದು ಕಾಂಗ್ರೆಸ್‌ ಪಕ್ಷ ಈ ಭಾರೀ ಚುನಾವಣೆ ಪ್ರಣಾಳಿಕೆಯಲ್ಲಿ ಪ್ರತಿ 200ಕ್ಕಿಂತ ಕಡಿಮೆ ಯೂನಿಟ್‌ ಕರೆಂಟ್‌ ಬಳಸುವ ಮನೆಗಳಿಗೆ ಕರೆಂಟ್‌ ಬಿಲ್‌ ಉಚಿತ ಎಂದು ಹೇಳಿದೆ. ಇದೀಗ ಅದಕ್ಕೆ ಕಂಡಿಷನ್‌ ಹಾಕಿದೆ.

ಹೌದು ಕಾಂಗ್ರೆಸ್‌ ಪಕ್ಷ ಅಧಿಕಾರ ಸ್ವೀಕರಿಸುವ ಮುನ್ನವೇ ತಾನು ನೀಡುರುವ ಭರವಸೆಯನ್ನು ಹುಸಿಗೊಳಿಸಿದೆ ಎನ್ನುವುದು ಜನರ ಆಕ್ರೋಶವಾಗಿದೆ. ಅಂದೆನೆಂದರೆ ಪಕ್ಷದ ಪ್ರಣಾಳಿಕೆಯಲ್ಲಿ ಪ್ರತಿ 200ಕ್ಕಿಂತ ಕಡಿಮೆ ಯೂನಿಟ್‌ ಕರೆಂಟ್‌ ಬಳಸುವ ಮನೆಗಳಿಗೆ ಕರೆಂಟ್‌ ಬಿಲ್‌ ಉಚಿತ ಎಂದು ಹೇಳಿದೆ. ಇದೀಗ ಆ ಹೇಳಿಕೆಯನ್ನು ತಿರುಚಿದೆ, ಟ್ಯಾಕ್ಸ್‌ ಕಟ್ಟುವ ಮನೆಗಳಿಗೆ ಕರೆಂಟ್‌ ಉಚಿತ ಇಲ್ಲ ಎಂದು ಹೇಳಿದೆ. ಹಾಗಾದರೆ ಪ್ರತಿ ಮನೆಯ ಮಹಿಳಾ ಸದಸ್ಯೆಗೆ ಪ್ರತಿ ತಿಂಗಳು ಎರಡು ಸಾವಿರ ಸೇರಿದಂತೆ ಉಳಿದ ಭರವಸೆ ಕಥೆ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಮುಂದಿನ ದಿನದಲ್ಲಿ ಹೇಳಲಾಗುತ್ತದೆ ಎಂದು ಹೇಳಿದೆ. ಅಷ್ಟಕ್ಕೂ ಈ ಭಾರೀ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಇರುವುದು ಏನು ಎನ್ನುವುದನ್ನು ಈ ಕೆಳಗೆ ತಿಳಿಸಲಾಗಿದೆ.

ಕಾಂಗ್ರೆಸ್‌ ಪ್ರನಾಳಿಕೆಯಲ್ಲೇನಿದೆ ?

  • ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​
  • ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
  • ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
  • ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
  • ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
  • ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
  • ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ
  • ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ
  • ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ
  • ನೀರಾವರಿಗಾಗಿ ಮುಂದಿನ 5 ವರ್ಷಗಳಲ್ಲಿ 1.50ಲಕ್ಷ ಕೋಟಿ ರೂ.
  • ಕನಕಪುರದಲ್ಲಿ ಅತ್ಯಾಧುನಿಕ ವಿಶ್ವ ದರ್ಜೆಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
  • ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ
  • ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
  • ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.
  • ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
  • ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ
  • ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ
  • NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ
  • ಸರ್ಕಾರದಿಂದಲೇ ಮನೆಗಳ ನಿರ್ಮಾಣ
  • ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ)
  • ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ
  • ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (
  • SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
  • ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ
  • ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ.
  • ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ
  • ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ.
  • ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ.
  • ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ, ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ, ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ)

ಇದನ್ನೂ ಓದಿ : Karnataka Next CM : ಡಿಕೆ ಶಿವಕುಮಾರ್‌ ಸಿಎಂ, ಜಗದೀಶ್‌ ಶೆಟ್ಟರ್‌ ಡಿಸಿಎಂ ?

Congress manifesto: Free electricity for tax payers: What did Congress say? what to do

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular