ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karmnataka Assembly Elections 203)ಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಕಾರ್ಯವನ್ನು ನಡೆಸುತ್ತಿವೆ. ರಾಜಕೀಯ ಪಕ್ಷಗಳು ಈ ಬಾರಿ ಮತದಾರರಿಗೆ ಭರ್ಜರಿ ಘೋಷಣೆಗಳನ್ನು ನೀಡುತ್ತಿವೆ. ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ಆರನೇ ಗ್ಯಾರಂಟಿ (6th Congress guarantee) ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಘೋಷಣೆ ಮಾಡಿದೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಗಾಂಧಿ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಸ್ತುತ 11,500ರೂ. ಗೌರವಧನವನ್ನು ನೀಡಲಾಗುತ್ತಿದ್ದು, ಕಾಂಗ್ರೆಸ್ ಸರಕಾರಕ್ಕೆ ಅಧಿಕಾರಕ್ಕೆ ಬಂದ್ರೆ 15,000 ಸಾವಿರ ರೂ.ಗಳಿಗೆ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದೆ. ಇನ್ನು ಅಂಗನವಾಡಿ ಸಹಾಯಕಿಯರಿಗೆ ಪ್ರಸ್ತುತ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ 5,000 ರೂ.ನಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನವನ್ನು ಪರಿಷ್ಕರಣೆ ಮಾಡುವುದಾಗಿ ಘೋಷಣೆ ಮಾಡಿದೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗು ಬಿಸಿಯೂಟ ಅಡುಗೆ ಕಾರ್ಯಕರ್ತರಿಗೆ ಶ್ರೀಮತಿ ಪ್ರಿಯಾಂಕಾ ಗಾಂಧಿಯವರು ಇಂದು ಗೌರವ ಧನ ಹೆಚ್ಚಳದ ಕಾಂಗ್ರೆಸ್ ಗ್ಯಾರಂಟಿಯನ್ನು ಘೋಷಿಸಿದ್ದಾರೆ.
— Karnataka Congress (@INCKarnataka) April 30, 2023
ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಗ್ಯಾರಂಟಿ
– @priyankagandhi #ಕಾಂಗ್ರೆಸ್_ಬರಲಿದೆ_ಪ್ರಗತಿ_ತರಲಿದೆ pic.twitter.com/9I4GQuO8D0
ಇದನ್ನೂ ಓದಿ : ರೋಡ್ ಶೋ ವೇದಿಕೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿಗೆ ಗದರಿಸಿದ ಅಮಿತ್ ಶಾ
ಇದನ್ನೂ ಓದಿ : ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ನಾಯಕತ್ವದ ಕಿತ್ತಾಟ : ಯಾರಾಗ್ತಾರೆ ಮುಂದಿನ ಸಿಎಂ ?
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈಗಾಗಲೇ ಭರ್ಜರಿ ಘೋಷಣೆಗಳನ್ನು (6th Congress guarantee) ಮಾಡಿದೆ. ಪ್ರತೀ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದ್ದು, ಇದೀಗ ಆರನೇ ಗ್ಯಾರಂಟಿ ಘೋಷಿಸಿದೆ.
ಇದನ್ನೂ ಓದಿ : ಒಂದೇ ಕುಟುಂಬದ ಎಷ್ಟು ಮಂದಿ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಬಹುದು ?
ಇದನ್ನೂ ಓದಿ : LPG Price : ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್, ಸಿಲಿಂಡರ್ ಬೆಲೆಯಲ್ಲಿ 171.50 ರೂ. ಇಳಿಕೆ