VIMS Corona explosion : ವಿಮ್ಸ್‌ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಪೋಟ : 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಇದೀಗ ಬಳ್ಳಾರಿಯ ವಿಮ್ಸ್‌ ಕಾಲೇಜಿನ (VIMS Corona explosion) ಸುಮಾರು 21 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ.

ಕಾಲೇಜಿನಲ್ಲಿರುವ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಮಾರು ಕಾಲೇಜಿನ ಹಾಸ್ಟೆಲ್‌ನಲ್ಲಿದ್ದ ಸುಮಾರು 250 ವಿದ್ಯಾರ್ಥಿಗಳ ಪೈಕಿ 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸುವಂತೆ ಸೂಚನೆ ನೀಡಿದೆ. ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ವಿಮ್ಸ್‌ ಕಾಲೇಜಿನ ಹಾಸ್ಟೆಲ್‌ನ ಉಳಿದ ವಿದ್ಯಾರ್ಥಿಗಳಿಗೂ ಕೊರೊನಾ ಸೋಂಕು ಒಕ್ಕರಿಸಿದೆಯೇ ಅನ್ನೋ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಬೆಂಗಳೂರಲ್ಲಿ ನಾಳೆಯಿಂದ ಶಾಲೆಗಳು ಬಂದ್‌

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ. ಬೆಂಗಳೂರಲ್ಲಿ 10 ಮತ್ತು 12 ನೇ ತರಗತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತರಗತಿಗಳನ್ನು(School Close) ಬಂದ್‌ ಮಾಡಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಅಲ್ಲದೇ ನೈಟ್‌ ಕರ್ಪ್ಯೂ ಮುಂದುವರಿಸುವುದರ ಜೊತೆಗೆ ರಾಜ್ಯದಾದ್ಯಂತ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ನಾಳೆ ರಾತ್ರಿಯಿಂದಲೇ ಹೊಸ ರೂಲ್ಸ್‌ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್‌ ತಾಂತ್ರಿಕ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಹಿರಿಯ ಸಚಿವರು, ಅಧಿಕಾರಿಗಳು ಭಾಗಿಯಾಗಿದ್ದರು. ನೆರೆಯ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿಯೂ ಕೊರೊನಾ ಸ್ಪೋಟವಾಗಿದ್ದು, ದೆಹಲಿ, ಪಶ್ವಿಮಬಂಗಾಲ, ತೆಲಂಗಾಣದಲ್ಲಿಯೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿಂದು ಮಹತ್ವದ ಸಭೆಯನ್ನು ನಡೆಸಲಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರಕಾರ ಜೊತೆಗೆ ಕೇರಳ, ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಲದಲ್ಲಿ ಈಗಾಗಲೇ ಕೋವಿಡ್‌ ಹಾಗೂ ಓಮಿಕ್ರಾನ್‌ ಬಗ್ಗೆ ತೀರ್ಮಾನ ಕೈಗೊಂಡಿದೆ. ಕೋವಿಡ್‌ಗಿಂತ ಓಮಿಕ್ರಾನ್‌ ಐದು ಪಟ್ಟು ಜಾಸ್ತಿ ಹರಡುತ್ತಿದೆ ಎಂದು ತಜ್ಞರು ವರದಿಯನ್ನು ನೀಡಿದ್ದಾರೆ. ಬೆಂಗಳೂರಲ್ಲಿ ಒಂದೇ 3048 ಕೊರೊನಾ ಪ್ರಕರಣ ದಾಖಲಾಗಿದ್ದು, 147 ಓಮಿಕ್ರಾನ್‌ ಪ್ರಕರಣ ಇಂದು ಒಂದೇ ದಿನ ದಾಖಲಾಗಿದೆ. ಕೊರೊನಾ ಸೋಂಕು ಎರಡರಿಂದ ಮೂರು ದಿನದಲ್ಲಿ ದುಪ್ಪಟ್ಟಾಗುತ್ತಿದೆ. ಐದಾರು ದಿನದಲ್ಲಿ ನಿತ್ಯವೂ ಹತ್ತು ಸಾವಿರ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ೨೦ರಿಂದ 40 ವರ್ಷದವರನ್ನೇ ಹೆಚ್ಚಾಗಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಇತರ ಜಿಲ್ಲೆಗಳಿಗೆ ಪ್ರತ್ಯೇಕ ರೂಲ್ಸ್‌ ಜಾರಿ ಮಾಡಲಾಗುತ್ತಿದೆ.

10 ಮತ್ತು12 ನೇ ತರಗತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಎರಡು ವಾರದ ಮಟ್ಟಿಗೆ ಮುಚ್ಚಲಾಗುತ್ತದೆ. ಉಳಿದ ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌ ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ. ಜನವರಿ 5 ರಿಂದ ರಾತ್ರಿ 10 ಗಂಟೆಯಿಂದಲೇ ಹೊಸ ರೂಲ್ಸ್‌ ಜಾರಿಗೆ ಬರಲಿದೆ. ಜನವರಿ 6 ರಿಂದ ಎರಡು ದಿನಗಳ ಕಾಲ ವೀಕೆಂಡ್‌ ಕರ್ಪ್ಯೂ ಜಾರಿಗೆ ಬರಲಿದೆ. ಸದ್ಯ ಜಾರಿಯಲ್ಲಿರುವ ನೈಟ್‌ ಕರ್ಪ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಮಾಲ್‌, ಚಿತ್ರಮಂದಿರ, ಪಬ್‌, ಬಾರ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಶೇ. 50 ರಷ್ಟು ಸಾಮರ್ಥ್ಯಕ್ಕೆ ಅನುಮತಿ ನೀಡಲಾಗಿದೆ. ಮದುವೆ ಹೊರಾಂಗಣ 200, ಒಳಾಂಗಣ 100 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಕಡೆಗಳಲ್ಲಿಯೂ ಎರಡು ಡೋಸ್‌ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಲೇ ಬೇಕು. ಇನ್ನು ಹೊರರಾಜ್ಯದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. ಸದ್ಯದ ಈ ನಿಯಮ ಮುಂದಿನ ಎರಡು ವಾರಗಳ ಕಾಲ ಜಾರಿಯಲ್ಲಿರಲಿದೆ.

ಇದನ್ನೂ ಓದಿ : ಹಳೆ ಮೆಸೇಜ್ ಅಳಿಸಿಹೋಗದಂತೆ ವಾಟ್ಸಾಪ್ ನಂಬರ್ ಬದಲಿಸುವುದು ಹೇಗೆ?

ಇದನ್ನೂ ಓದಿ : ದೇಶದಲ್ಲಿ ಒಂದೇ ದಿನ 58,097 ಹೊಸ ಕೋವಿಡ್​ ಪ್ರಕರಣಗಳು ವರದಿ

(Corona explosion at VIMS Medical College, Bellary: 21 students infected)

Comments are closed.